ರಟ್ಟೀಹಳ್ಳಿ : ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಅಜೀವಿಕಾ ಮಿಷನ್ ಗ್ರಾಮೀಣ ಕಾಯ್ದೆ ಬಡ ಕೂಲಿಕಾರರ ಬದುಕಿಗೆ ಹೆಚ್ಚು ಬಲತುಂಬುತ್ತದೆ ಎಂದು ಮಾಜಿ ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು.

ರಟ್ಟೀಹಳ್ಳಿ ತಾಲ್ಲೂಕಿನ ಕಡೂರು ಗ್ರಾಮದಲ್ಲಿ ಶನಿವಾರ ವಿಬಿ ಜಿ ರಾಮ್ ಜಿ ಜಾಗೃತ ಅಭಿಯಾನದಲ್ಲಿ ಮಾತನಾಡಿದರು.

ಯೋಜನೆ ಬಗ್ಗೆ ರಾಜ್ಯ ಸರ್ಕಾರ ಸುಳ್ಳು ಹೇಳಿ ಕೂಲಿಕಾರರ ದಾರಿ ತಪ್ಪಿಸುತ್ತಿದೆ. ಹಿಂದಿನ ನರೇಗಾ ಯೋಜನೆಯಲ್ಲಿ ಪ್ರತಿ ವರ್ಷ ನೂರು ದಿನಗಳ ಉದ್ಯೋಗ ಖಾತ್ರಿ ಇತ್ತು, ಈಗ 125 ದಿನಗಳಿಗೆ ಹೆಚ್ಚಿಗೆ ಮಾಡಿದೆ. ಈ 125 ದಿನಗಳನ್ನು ಗ್ರಾಮ ಪಂಚಾಯಿತಿಗಳೇ ನಿರ್ಧಾರ ಮಾಡಬಹುದು. ಆದರೆ ಕೇಂದ್ರ ಸರ್ಕಾರ ನಿರ್ಧಾರ ಮಾಡುತ್ತಿದೆ ಎಂಬ ಭಯವನ್ನು ಕಾರ್ಮಿಕರಲ್ಲಿ ಹುಟ್ಟಿಸುತ್ತಿದ್ದಾರೆ ಎಂದರು.

ವಿಬಿ ಜಿ ರಾಮ್ ಜಿ ಯೋಜನೆಯಲ್ಲಿ ಒಂದು ವಾರದಿಂದ 15 ದಿನಗಳ ಒಳಗೆ ಕಡ್ಡಾಯವಾಗಿ ಕಾರ್ಮಿಕರ ವೇತನ ಕೊಡುವ ಬಗ್ಗೆ ಸ್ಪಷ್ಟವಾಗಿದೆ. ರಾಜ್ಯ ಸರ್ಕಾರ ಅನುದಾನ ಸಿಗದೇ ಇರುವ ವಿಚಾರವನ್ನು ಹೇಳಿ ಕಾರ್ಮಿಕರಿಗೆ ಈ ಯೋಜನೆಯಿಂದ ದೂರ ಮಾಡುತ್ತಿದೆ. ನರೇಗಾ ಯೋಜನೆಯ ದುರ್ಬಳಕೆ ಆಗಿರುವುದು, ಸುಳ್ಳು ಕೂಲಿಕಾರರ ಹೆಸರು ಹೇಳಿ ವೇತನ ತೆಗೆದಿರುವ ಲೋಪ ಇದ್ದು, ಇದನ್ನು ಸರಿಪಡಿಸಲು ಬಯೋಮೆಟ್ರಿಕ್ ತಂತ್ರಜ್ಞಾನ ಬಳಸಿ ಸೋರಿಕೆ ತಡೆಗಟ್ಟಲು ಯೋಜನೆ ಮಾಡಿದರೆ ಇದರಿಂದ ವಂಚನೆ ಆಗುತ್ತದೆ ಎಂಬ ಸುಳ್ಳನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ಹೇಳುತ್ತಿದೆ ಎಂದು ತಿಳಿಸಿದರು.

ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ದೇವರಾಜ ನಾಗಣ್ಣನವರ, ರವಿಶಂಕರ ಬಾಳಿಕಾಯಿ, ಪ್ರಕಾಶಗೌಡ ಗೌಡ್ರ, ಜಗದೀಶಗೌಡ ಲಕ್ಕನಗೌಡ್ರ, ಶೇಖಪ್ಪ ತುಮ್ಮಿನಕಟ್ಟಿ, ಹನುಮಂತಪ್ಪ ಗಾಜೇರ, ನಿಂಗಪ್ಪ ತಳಗಟ್ಟಿ, ಹನುಮಂತ ಲಕ್ಕನಗೌಡ್ರ, ಬಸಣ್ಣ ಬುಳ್ಳಾಪುರ ಸೇರಿದಂತೆ ಗ್ರಾಮದ ಪ್ರಮುಖರು, ಗ್ರಾಮಸ್ಥರು ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.