ಹಾವೇರಿ: ರಾಣೆಬೆನ್ನೂರು ತಾಲ್ಲೂಕು ಚಿಕ್ಕಕುರುವತ್ತಿ ಗ್ರಾಮದ ಡಾ.ಬಿ.ಆರ್. ಅಂಬೇಡ್ಕರ್ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಲು ಶಾಸಕ ಮತ್ತು ತಹಶೀಲ್ದಾರ್ ಅವರು ನಿರ್ಲಕ್ಷ್ಯ ತೋರಿದ್ದಾರೆ ಎಂದು ಆರೋಪಿಸಿ, ಡಾ.ಬಿ.ಆರ್. ಅಂಬೇಡ್ಕರ್ ಅಭಿಮಾನಿಗಳು ಜಿಲ್ಲಾಡಳಿತ ಭವನದ ಮುಂಭಾಗ ಸೋಮವಾರ ‘ತಮಟೆ ಚಳವಳಿ’ ನಡೆಸಿದರು.

2019–20ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅನುದಾನದಡಿ ಅಂಬೇಡ್ಕರ್ ಭವನ ಮಂಜೂರಾಗಿದೆ. ಆದರೆ, ಭವನದ ಶಂಕುಸ್ಥಾಪನೆ ಕ್ರಮ ಕೈಗೊಳ್ಳುವಂತೆ ತಹಶೀಲ್ದಾರ್ ಅವರಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಸಾರ್ವಜನಿಕರ ಸಮಸ್ಯೆಗೆ ಸರಿಯಾಗಿ ಸ್ಪಂದಿಸದ ಕಾರಣ, ನಿತ್ಯ ಕಚೇರಿಗಳಿಗೆ ಅಲೆದಾಡುವಂತಾಗಿದೆ. ತಾಲ್ಲೂಕಿನಲ್ಲಿ ಅಕ್ರಮ ಮರಳು ದಂಧೆ, ಮಟಕಾ ಮತ್ತು ಜೂಜು ಚಟುವಟಿಕೆಗಳು ನಡೆಯುತ್ತಿವೆ. ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಈಗ ಸಾಂಕೇತಿಕವಾಗಿ ತಮಟೆ ಚಳವಳಿ ನಡೆಸಿದ್ದೇವೆ.ಚಿಕ್ಕಕುರುವತ್ತಿ ಗ್ರಾಮದಲ್ಲಿ ಆಗಿರುವ ಸಮಸ್ಯೆಯನ್ನು ಸರಿಪಡಿಸದೇ ಹೋದಲ್ಲಿ, ಶಾಸಕರ ಮತ್ತು ತಹಶೀಲ್ದಾರ್ ವಿರುದ್ಧ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ತಮಟೆ ಚಳವಳಿಯಲ್ಲಿ ಹನುಮಂತಪ್ಪ ಡಿ.ಕಬ್ಬಾರ, ಹನುಮಂತಪ್ಪ ಬಿ.ಪಾತ್ರೇರ, ರಮೇಶ ಬಿ.ಮಲ್ಲಾಡದ, ಫಕ್ಕೀರಪ್ಪ ಅನ್ವೇರಿ, ಸಿದ್ದಪ್ಪ ಬ.ಅನ್ವೇರಿ, ಬಸಪ್ಪ ಹೊನ್ನತ್ತಿ ಮುಂತಾದವರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.