ಬುಧವಾರ, 7 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಮಿಕರ ಕಿಟ್‌ ಕಳವು: ಕ್ರಮಕ್ಕೆ ಕಾಂಗ್ರೆಸ್‌ ಆಗ್ರಹ

Last Updated 17 ಜುಲೈ 2021, 15:34 IST
ಅಕ್ಷರ ಗಾತ್ರ

ಹಾವೇರಿ: ನಗರಸಭೆಯಲ್ಲಿ ಕಾರ್ಮಿಕರಿಗೆ ನೀಡಬೇಕಾಗಿದ್ದ ಕಾರ್ಮಿಕರ ಕಿಟ್‌ಗಳನ್ನು ರಾತ್ರೋರಾತ್ರಿ ದರೋಡೆ ಮಾಡಲಾಗಿದೆ. ಇದರಲ್ಲಿ ಭಾಗಿಯಾದ ವ್ಯಕ್ತಿಗಳನ್ನು ಬಂಧಿಸಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಕಾರ್ಮಿಕರ ಕಿಟ್‌ಗಳನ್ನು ಕಾರ್ಡ್ ಇದ್ದವರಿಗೆ ವಿತರಿಸುತ್ತಿಲ್ಲ. ಶಾಸಕರು ಚೀಟಿಗಳನ್ನು ನೀಡಿದವರಿಗೆ ಮಾತ್ರ ಕಿಟ್‌ಗಳನ್ನು ವಿತರಿಸುತ್ತಿದ್ದಾರೆ. ಇದು ಕಾನೂನು ಬಾಹಿರವಾಗಿದ್ದು ನಿಜವಾದ ಪಲಾನುಭವಿಗಳಿಗೆ ಅನ್ಯಾಯಾಗುತ್ತಿದೆ. ಕೂಡಲೇ ಅಧಿಕಾರಿಗಳು ಇದನ್ನು ಸರಿಪಡಿಸಬೇಕೆಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಎಂ. ಹಿರೇಮಠ ಮತ್ತು ಮಾಜಿ ಸಚಿವ ರುದ್ರಪ್ಪ ಲಮಾಣಿ ಹಾಗೂ ಕಾಂಗ್ರೆಸ್ ನಾಯಕರು ಒತ್ತಾಯಿಸಿದರು.

‘ಕಾರ್ಮಿಕರಿಗೆ ಕಿಟ್‌ಗಳ ವಿತರಣೆ ಮಾಡುವುದು ಸರ್ಕಾರದ ಕಾರ್ಯಕ್ರಮವೇ ಹೊರತು. ಬಿಜೆಪಿ ಪಕ್ಷದ ಕಾರ್ಯಕ್ರಮವಲ್ಲ. ಆದರೆ ಅರ್ಹ ಕಾರ್ಮಿಕರಿಗೆ ಕಿಟ್‌ಗಳನ್ನು ಕೊಡದೇ ಶಾಸಕರ ಚೀಟಿ ತಂದವರಿಗೆ ಕೊಡುತ್ತಿರುವುದು ದುರ್ದೈವದ ಸಂಗತಿ. ಶಾಸಕರು ಈ ರೀತಿ ಅಧಿಕಾರದ ದುರ್ಬಳಕೆ ಮಾಡಿಕೊಳ್ಳುತ್ತಿರುವುದು ಸರಿಯಲ್ಲ’ ಎಂದು ಮಾಜಿ ಸಚಿವ ರುದ್ರಪ್ಪ ಲಮಾಣಿ ಬೇಸರ ವ್ಯಕ್ತಪಡಿಸಿದರು.

ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಹಿರೇಮಠ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಎಸ್. ಬಿಷ್ಟನಗೌಡ್ರ, ಎಂ.ಎಂ. ಮೈದುರ, ನಗರಸಭೆ ಸದಸ್ಯರು, ಮುಖಂಡರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT