ಹಾವೇರಿ: ಜಿಲ್ಲೆಯ ಹಲವು ಕಡೆಗಳಲ್ಲಿ ದೀಪಾವಳಿ ಹಬ್ಬದ ನಿಮಿತ್ತ ಬುಧವಾರ (ಅ.22) ಹಮ್ಮಿಕೊಂಡಿದ್ದ 'ಕೊಬ್ಬರಿ ಹೋರಿ ಬೆದರಿಸುವ ಸ್ಪರ್ಧೆ' ಹಾಗೂ ಹೋರಿಗಳ ಮೆರವಣಿಗೆ ಸಂದರ್ಭದಲ್ಲಿ ಹೋರಿ ಗುದ್ದಿ ಮೂವರು ಮೃತಪಟ್ಟಿದ್ದಾರೆ.

ಹಾವೇರಿಯ ದಾನೇಶ್ವರಿನಗರದ ಚಂದ್ರಶೇಖರ ಕೋಡಿಹಳ್ಳಿ (70), ಹಾವೇರಿ ತಾಲ್ಲೂಕಿನ ದೇವಿಹೊಸೂರಿನ ಘನಿಸಾಬ ಮಹಮ್ಮದ್ ಹುಸೇನ್ ಬಂಕಾಪುರ (75) ಹಾಗೂ ಹಾನಗಲ್ ತಾಲ್ಲೂಕಿನ ತಿಳವಳ್ಳಿಯ ಭರತ್ ರಾಮಪ್ಪ ಹಿಂಗಮೇರಿ (24) ಮೃತರು.

ಹೆಸ್ಕಾಂನ ನಿವೃತ್ತ ನೌಕರ ಚಂದ್ರಶೇಖರ್ ಕೋಡಿಹಳ್ಳೊ ಅವರು ಹಾವೇರಿಯ ಹಳೇ ಪಿ.ಬಿ.ರಸ್ತೆಯಲ್ಲಿ ನಡೆದುಕೊಂಡು ಹೊರಟಿದ್ದರು. ಹಾವೇರಿಯ ವೀರಭದ್ರೇಶ್ವರ ದೇವಸ್ಥಾನ ಎದುರು ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಓಡಿದ ಹೋರಿ, ಹಳೇ ಪಿ.ಬಿ. ರಸ್ತೆಗೆ ಬಂದಿತ್ತು. ಇದೇ ಹೋರಿ, ಚಂದ್ರಶೇಖರ್ ಅವರಿಗೆ ಗುದ್ದಿ ಈ ಅವಘಡ ನಡೆದಿದೆ. ದೇವಿಹೊಸೂರು ಗ್ರಾಮದಲ್ಲಿ ದೀಪಾವಳಿ ಹಬ್ಬದ ನಿಮಿತ್ತ ಎತ್ತುಗಳನ್ನು ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಮೆರವಣಿಗೆಯಲ್ಲಿದ್ದ ಎತ್ತು ಬೆದರಿ ಹೊಂಡದ ಓಣಿಯಲ್ಲಿರುವ ಮನೆಯ ಕಟ್ಟೆ

ಮೇಲೆ ಕುಳಿತಿದ್ದ ಘನಿಸಾಬ ಅವರ ಕುತ್ತಿಗೆ ಮತ್ತು ಎದೆಗೆ ಕೊಂಬಿನಿಂದ ತಿವಿದಿತ್ತು. ಅವರನ್ನು ಚಿಕಿತ್ಸೆಗಾಗಿ

ಹಾವೇರಿಯ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

ಇನ್ನೊಂದು ಘಟನೆಯಲ್ಲಿ, ತಿಳವಳ್ಳಿ ಗ್ರಾಮದ ಮುಖ್ಯ ರಸ್ತೆಯಲ್ಲಿ ಹೋರಿ ಬೆದರಿಸುವ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು. ಅದನ್ನು ನೋಡಲು ಹೋಗಿದ್ದ ಭರತ್ ಅವರ ಎದೆಗೆ ಹೋರಿಯೊಂದು ಎದೆಗೆ ಗುದ್ದಿತ್ತು. ಇದರಿಂದಾಗಿ ಭರತ್, ನೆಲಕ್ಕೆ ಬಿದ್ದಿದ್ದರಿಂದ ತಲೆಗೆ ಪೆಟ್ಟಾಗಿತ್ತು. ಅವರನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದ್ಪತ್ರೆಯಲ್ಲಿಯೇ ಅವರು ಮೃತಪಟ್ಟಿದ್ದಾರೆ. ಮೂರು ಘಟನೆ ಬಗ್ಗೆ ಸದ್ಯಕ್ಕೆ ಯಾವುದೇ ಪ್ರಕರಣ ದಾಖಲಾಗಿಲ್ಲ.
.ಶಿರಸಿ: ಮೈ ನವಿರೇಳಿಸಿದ ಹೋರಿ ಹಬ್ಬ.ಸಂಕ್ರಾಂತಿ ಹಬ್ಬದ ಅಂಗವಾಗಿ ಶಿವಮೊಗ್ಗದಲ್ಲಿ ಹೋರಿ ಬೆದರಿಸುವ ಹಬ್ಬ: ಇಬ್ಬರ ಸಾವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.