ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಪಿಎಸ್‌ಗೆ ಮಾರ್ಚ್ 15ರ ಗಡುವು

ವಿವಿಧ ವಸತಿ ಯೋಜನೆಯಡಿ ತಡೆಹಿಡಿದ ಹತ್ತು ಸಾವಿರ ಮನೆಗಳ ತೆರವು
Last Updated 26 ಫೆಬ್ರುವರಿ 2020, 15:19 IST
ಅಕ್ಷರ ಗಾತ್ರ

ಹಾವೇರಿ: ಜಿಲ್ಲೆಯಲ್ಲಿ ಬಸವ ವಸತಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್‌ ವಸತಿ ಯೋಜನೆಯಡಿ ತಡೆಹಿಡಿದ (ಬ್ಲಾಕ್ಡ್‌) ಮನೆಗಳನ್ನು ವಿಶೇಷ ಮನವಿಯ ಮೇರೆಗೆ ತೆರವುಗೊಳಿಸಲಾಗಿದೆ. ಮಾರ್ಚ್ 14ರೊಳಗಾಗಿ ತಳಪಾಯ ಹಾಕಿ ಜಿ.ಪಿ.ಎಸ್. ಮಾಡಿಸಿಕೊಳ್ಳಲು ಫಲಾನುಭವಿಗಳಿಗೆ ಜಿಲ್ಲಾ ಪಂಚಾಯಿತಿ ಸಿಇಒ ರಮೇಶ ದೇಸಾಯಿ ಮನವಿ ಮಾಡಿಕೊಂಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಜಿಲ್ಲೆಯಾದ್ಯಂತ 2013-14 ರಿಂದ 2017-18ರವರೆಗೆ ಬಸವತಿ ಯೋಜನೆಯಡಿ 5,728, ಡಾ.ಬಿ.ಆರ್.ಅಂಬೇಡ್ಕರ್‌ ವಸತಿ ಯೋಜನೆಯಡಿ 3,831 ಮನೆಗಳು ಸೇರಿ 9559 ಮನೆಗಳನ್ನು ತೆರವುಗೊಳಿಸಲಾಗಿದೆ. ಈ ಕುರಿತಂತೆ ಫಲಾನುಭವಿಗಳು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಸಚಿವರು ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿಈ ಅವಕಾಶ ಕಲ್ಪಿಸಿದ್ದಾರೆ ಎಂದರು.

ಮಾರ್ಚ್‌ 15ರ ನಂತರ ಜಿಪಿಎಸ್‍ಗೆ ಅಳವಡಿಸಲು ಅವಕಾಶವಿರುವುದಿಲ್ಲ. ಮಂಜೂರಾದ ಸದರಿ ಮನೆಗಳನ್ನು ಶಾಶ್ವತವಾಗಿ ಬ್ಲಾಕ್‌ ಮಾಡಲಾಗುತ್ತದೆ. ನಂತರದ ದಿನಗಳಲ್ಲಿ ಫಲಾನುಭವಿಗಳ ಯಾವುದೇ ಮನವಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ತಿಳಿಸಿದ್ದಾರೆ.

ಬಸವ ವಸತಿ ಯೋಜನೆಯಡಿ ಮನೆ ನಿರ್ಮಾಣಕ್ಕೆ ₹1.20 ಲಕ್ಷ ಹಾಗೂ ಡಾ.ಬಿ.ಆರ್.ಅಂಬೇಡ್ಕರ ವಸತಿ ಯೋಜನೆಯಡಿ ₹ 1.50 ಲಕ್ಷ ಸರ್ಕಾರದ ಸಹಾಯಧನ ನೀಡಲಾಗುತ್ತದೆ. ಇದರೊಂದಿಗೆ ಜಿಲ್ಲಾ ಪಂಚಾಯಿತಿ ವತಿಯಿಂದ ಮನರೇಗಾ ಯೋಜನೆಯಡಿ ಒಂದು ನೂರು ಮಾನವ ದಿನಗಳನ್ನು ಮನೆ ನಿರ್ಮಾಣದ ಕಾರ್ಯಕ್ಕಾಗಿ ಬಳಸಿಕೊಳ್ಳಲು ಅವಕಾಶ ಕಲ್ಪಿಸಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT