ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹರ್ ಘರ್ ತಿರಂಗಾ ಜಾಗೃತಿ ಜಾಥಾ

Published : 13 ಆಗಸ್ಟ್ 2024, 15:35 IST
Last Updated : 13 ಆಗಸ್ಟ್ 2024, 15:35 IST
ಫಾಲೋ ಮಾಡಿ
Comments

ರಾಣೆಬೆನ್ನೂರು: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ  ತಾಲ್ಲೂಕು ಆಡಳಿತ, ನಗರಸಭೆ, ತಾಲ್ಲೂಕು ಪಂಚಾಯಿತಿ ಹಾಗೂ ವಿವಿಧ ಇಲಾಖೆಗಳಿಂದ ಮಂಗಳವಾರ ನಗರದಲ್ಲಿ ಏರ್ಪಡಿಸಿದ್ದ ಭಾರತ ಮಾತೆ ಭಾವಚಿತ್ರ ಮೆರವಣಿಗೆ ಹಾಗೂ ಹರ್ ಘರ್ ತಿರಂಗಾ ಜಾಗೃತಿ ಜಾಥಾಕ್ಕೆ ತಹಶೀಲ್ದಾರ್ ಆರ್‌.ಎಚ್‌. ಭಾಗವಾನ ಹಾಗೂ ಪೌರಾಯುಕ್ತ ಎಫ್‌.ಐ. ಇಂಗಳಗಿ ಚಾಲನೆ ನೀಡಿದರು.

ಭಾರತ ಮಾತೆ ಮೂರ್ತಿಯ ಸಾರೋಟ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ನಗರದ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸೈಕಲ್ ಹಾಗೂ ಬೈಕ್ ರ‍್ಯಾಲಿಯೊಂದಿಗೆ ಮೆರವಣಿಗೆಯಲ್ಲಿ ಸಾಗಿದರು.

ತಾಲ್ಲೂಕು ಪಂಚಾಯಿತಿ ಇಒ ಎಸ್.ಪಿ. ಸುಮಲತಾ, ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ನೂರ ಅಹ್ಮದ ಹಲಗೇರಿ, ಬಿಸಿಎಂ ಅಧಿಕಾರಿ ವಿ.ಎಸ್. ಹಿರೇಮಠ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಗಿರೀಶ ಮುಡಿಯಮ್ಮನವರ, ಕ್ಷೇತ್ರ ಶಿಕ್ಷಣಾಧಿಕಾರಿ ಶಾಮಸುಂದರ ಅಡಿಗ, ದೈಹಿಕ ಶಿಕ್ಷಣ ಶಿಕ್ಷಕರ ಪ್ರಭಾಕರ ಚಿಂದಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಸಿ.ವಿ.ಅಡಿವೇರ, ಡಿವೈಎಸ್‌ಪಿ ಗಿರೀಶ ಬೋಜಣ್ಣನವರ, ನಗರಸಭೆ ಸದಸ್ಯರು ಹಾಗೂ ರೋಟರಿ, ಲಯನ್ಸ್‌ ಹಾಗೂ ವಿವಿಧ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು, ಪೊಲೀಸ್‌, ಎನ್‌ಎಸ್‌ಎಸ್‌ ಹಾಗೂ ಎನ್‌ಸಿಸಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT