ಬ್ಯಾಡಗಿ: ಪಾಕಿಸ್ತಾನದ ವಿರುದ್ಧ ನಡೆದ ಯುದ್ಧದಲ್ಲಿ ಪ್ರಾಣದ ಹಂಗು ತೊರೆದು ಹೋರಾಟ ನಡೆಸಿರುವ ಯೋಧರಿಗೆ ಆತ್ಮಸ್ತೈರ್ಯ ತುಂಬುವ ನಿಟ್ಟಿನಲ್ಲಿ ಪಟ್ಟಣದಲ್ಲಿ ಮೇ 17ರಂದು ಬೆಳಿಗ್ಗೆ 10 ಗಂಟೆಗೆ ತಿರಂಗಾ ಯಾತ್ರೆ ಹಮ್ಮಿಕೊಳ್ಳಲಾಗಿದೆ.

ಪಟ್ಟಣದ ಸಿದ್ಧೇಶ್ವರ ದೇವಸ್ಥಾನದಿಂದ ಆರಂಭಗೊಂಡು ಪ್ರಮುಖ ಬೀದಿಗಳಲ್ಲಿ ಸಂಚರಿಸಿ ತಹಶೀಲ್ದಾರ್ ಕಚೇರಿಯನ್ನು ಯಾತ್ರೆ ತಲುಪಲಿದೆ ಎಂದು ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಹೇಳಿದರು.

ಪಟ್ಟಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ಪದೇಪದೇ ಕಾಲು ಕೆರೆದು ಭಾರತದ ಮೇಲೆ ದಾಳಿ ಮಾಡುವ ಪಾಕಿಸ್ತಾನದ ಆಟ ನಡೆಯದಂತೆ ಪ್ರಧಾನಿ ನರೇಂದ್ರ ಮೋದಿ ಯುದ್ಧವನ್ನು ಘೋಷಿಸಿದ್ದಾರೆ. ಸೈನಿಕರಿಗೆ ನೈತಿಕ ಬೆಂಬಲ ನೀಡುವ ಉದ್ದೇಶದಿಂದ ತಿರಂಗಯಾತ್ರೆ ಹಮ್ಮಿಕೊಂಡಿರುವುದು ವಿಶೇಷವಾಗಿದೆ. ಈ ಕಾರ್ಯಕ್ರಮದಲ್ಲಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರು ಹಾಗೂ ಎಲ್ಲಾ ನಾಗರಿಕರು ಪಾಲ್ಗೊಳ್ಳುವರು’ ಎಂದರು.

ಈ ವೇಳೆ ಮುಖಂಡಾರಾದ ಮುರಿಗೆಪ್ಪ ಶೆಟ್ಟರ, ಚಂದ್ರಣ್ಣ ಶೆಟ್ಟರ, ಕಲಾವತಿ ಬಡಿಗೇರ, ಸರೋಜಾ ಉಳ್ಳಾಗಡ್ಡಿ, ಕವಿತಾ ಸೊಪ್ಪಿನಮಠ, ಮಲ್ಲಮ್ಮ ಪಾಟೀಲ, ಶಂಕರಗೌಡ ಪಾಟೀಲ, ನಿಂಗಪ್ಪ ಬಟ್ಟಲಕಟ್ಟಿ, ಸಿದ್ದಲಿಂಗಪ್ಪ ಪಟ್ಟಣಶೆಟ್ಟಿ, ಶಂಕ್ರಣ್ಣ ಅಕ್ಕಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.