ಹಾವೇರಿ: ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ವಿವಿಧ ಅಧಿಕಾರಿಗಳನ್ನೊಳಗೊಂಡ ತಂಡ ರಾಣೆಬೆನ್ನೂರು ನಗರದಲ್ಲಿ ಶನಿವಾರ ವಿವಿಧ ಅಂಗಡಿಗಳ ಮೇಲೆ ದಾಳಿ ನಡೆಸಿ ದಂಡ ವಸೂಲಿ ಮಾಡಿದೆ.

ತಂಬಾಕು ನಿಯಂತ್ರಣ ಕಾಯ್ದೆ-2003ರ ವಿರುದ್ಧವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವ ಮತ್ತು ನೇರ-ಪರೋಕ್ಷವಾಗಿ ತಂಬಾಕು ಜಾಹೀರಾತು ಪ್ರದರ್ಶನ, ಶಾಲಾ-ಕಾಲೇಜು ಆವರಣದ 100 ಮೀಟರ್ ಅಂತರದೊಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವ ಅಂಗಡಿ, ಬೇಕರಿ, ಹೋಟೆಲ್ ಮತ್ತು ಹೋಲ್‍ಸೇಲ್ ಅಂಗಡಿ ಮಾಲೀಕರಿಗೆ ನೋಟೀಸ್ ಜಾರಿ ಮಾಡಿ ತಂಬಾಕು ನಿಯಂತ್ರಣ ಕಾಯ್ದೆ-2003ರ ಅಡಿಯಲ್ಲಿ ಕಲಂ-4ರಡಿ ₹3100 ದಂಡ ವಸೂಲಿ ಮಾಡಲಾಗಿದೆ.

ದಾಳಿಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ದಾದಾಪೀರ ಹುಲಿಕಟ್ಟಿ, ಮಹೇಶ ಕುಮ್ಮೂರ, ಆಹಾರ ಸುರಕ್ಷತಾ ಅಧಿಕಾರಿ ಎಸ್.ಸಿ.ಕೋರಿ, ಪೊಲೀಸ್ ಸಿಬ್ಬಂದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.