ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಂಬಾಕು ಉತ್ಪನ್ನ ಮಾರಾಟ: ₹2400 ದಂಡ ವಸೂಲಿ

Last Updated 29 ಜೂನ್ 2020, 13:43 IST
ಅಕ್ಷರ ಗಾತ್ರ

ಹಾವೇರಿ: ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ವಿವಿಧ ಅಧಿಕಾರಿಗಳನ್ನೊಳಗೊಂಡ ತಂಡ ಇತ್ತೀಚೆಗೆ ಹಿರೇಕೆರೂರು ಪಟ್ಟಣದ ವಿವಿಧ ಅಂಗಡಿಗಳ ಮೇಲೆ ದಾಳಿ ನಡೆಸಿ ದಂಡ ವಸೂಲಿ ಮಾಡಿದೆ.

ತಂಬಾಕು ನಿಯಂತ್ರಣ ಕಾಯ್ದೆ-2003ರ ವಿರುದ್ಧವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವ ಮತ್ತು ನೇರ ಮತ್ತು ಪರೋಕ್ಷವಾಗಿ ತಂಬಾಕು ಜಾಹೀರಾತು ಪ್ರದರ್ಶನ, ಶಾಲಾ-ಕಾಲೇಜು ಆವರಣದ 100 ಮೀಟರ್ ಅಂತರದೊಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವ ಅಂಗಡಿ, ಬೇಕರಿ, ಹೋಟೆಲ್ ಮಾಲೀಕರಿಗೆ ನೋಟೀಸ್ ಜಾರಿ ಮಾಡಿ ತಂಬಾಕು ನಿಯಂತ್ರಣ ಕಾಯ್ದೆ-2003ರ ಅಡಿಯಲ್ಲಿ ಕಲಂ-4ರಡಿ ₹2400 ದಂಡ ವಸೂಲಿ ಮಾಡಲಾಗಿದೆ.

ದಾಳಿಯಲ್ಲಿ ಹಿರೇಕೆರೂರು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಝಡ್.ಆರ್.ಮಕಾನದಾರ, ಜಿಲ್ಲಾ ತಂಬಾಕು ನಿಯಂತ್ರಣ ಸಲಹೆಗಾರರಾದ ಡಾ.ಸಂತೋಷ ವಿ.ದಡ್ಡಿ ಹಾಗೂ ದಾದಾಪೀರ ಹುಲಿಕಟ್ಟಿ, ಮಹೇಶ ಕುಮ್ಮೂರ ಹಾಗೂ ಪೊಲೀಸ್ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT