ಹಾವೇರಿ: ‘ದೇಶದ ಆರ್ಥಿಕತೆಯ ಬೆಳವಣಿಗೆಯಲ್ಲಿ ಸೇವಾ ವಲಯ, ಉತ್ಪಾದನೆ ವಲಯಗಳಂತೆ ಪ್ರವಾಸೋಧ್ಯಮ ವಲಯವು ಕೂಡ ಆದಾಯವನ್ನು ತಂದುಕೊಡುತ್ತಿದೆ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಲ್. ನಾಗರಾಜ್ ಹೇಳಿದರು.

ನಗರದ ಗಾಂಧಿ ಭವನದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪ್ರವಾಸೋಧ್ಯಮ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಪ್ರವಾಸೋಧ್ಯಮ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಇಂದು ದೇಶದಾದ್ಯಂತ ಪ್ರವಾಸೋಧ್ಯಮ ಹಾಗೂ ಸುಸ್ಥಿರ ಪರಿವರ್ತನೆ ಎಂಬ ಘೋಷವಾಕ್ಯದೊಂದಿಗೆ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಆಚರಿಸಲಾಗುತ್ತಿದೆ’ ಎಂದರು.

ಪ್ರವಾಸೋಧ್ಯಮ ದೇಶದ ಆರ್ಥಿಕತೆ ಬೆಳವಣಿಗೆಗೆ ಸಹಾಯಕಾರಿ. ಭಾರತ ದೇಶದಲ್ಲಿ ಪ್ರವಾಸೋಧ್ಯಮ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುವ ಅವಶ್ಯಕತೆ ಇದೆ. ಭಾರತವು ಬೌಗೋಳಿಕವಾಗಿ ಶ್ರೀಮಂತವಾಗಿದ್ದು, ಪ್ರವಾಸೋದ್ಯಮಕ್ಕೆ ಬೇಕಾದ ಎಲ್ಲ ಸಂಪನ್ಮೂಲಗಳು ಹೆರಳವಾಗಿವೆ’ ಎಂದರು.

ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಸಹ ಪ್ರಾಧ್ಯಾಪಕ ಬಂಡು ಸುರೇಶ ಕೆಂಪವಾಡೆ ಅವರು ವಿಶೇಷ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಆರ್.ವಿ. ಚಿನ್ನಿಕಟ್ಟಿ, ನಗರ ಸಭೆ ಉಪಾಧ್ಯಕ್ಷ ಮಲ್ಲಿಕಾರ್ಜುನ ಸಾತೇನಹಳ್ಳಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ವೀರಯ್ಯಸ್ವಾಮಿ ಹಿರೇಮಠ, ಕೆಸಿಸಿ ಬ್ಯಾಂಕ್ ನಿರ್ದೇಶಕ ಕೊಟ್ರೇಶಪ್ಪ ಬಸಗಣ್ಣಿ, ಶಂಕರ ಸುತಾರ, ಎಂಕೆಇಟಿ ಮಹಿಳಾ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಬಸಪ್ಪ ಚಳಕೊಪ್ಪ
ಇದ್ದರು.

ಪ್ರವಾಸೋಧ್ಯಮ ಅಭಿವೃದ್ಧಿಗೆ ಸಾರ್ವಜನಿಕರ ಸಹಕಾರ ಮುಖ್ಯ. ಸಾರ್ವಜನಿಕರು ಪ್ರೇಕ್ಷಣಿಯ ಸ್ಥಳಗಳಿಗೆ ಭೇಟಿ ನೀಡಿದಾಗ ಪ್ರದೇಶವನ್ನು ಹಾಳುಮಾಡದೆ ರಕ್ಷಿಸುವಂತ ಕೆಲಸವಾಗಬೇಕು.
ಎಲ್. ನಾಗರಾಜ್ ಅಪರ ಜಿಲ್ಲಾಧಿಕಾರಿ ಹಾವೇರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.