ಬ್ಯಾಡಗಿ: ತಾಲ್ಲೂಕಿನ ಹಿರೇಹಳ್ಳಿ ಕುಮ್ಮೂರು ಮಧ್ಯದಲ್ಲಿ ಟ್ರ್ಯಾಕ್ಟರ್ನಲ್ಲಿ ತೆರಳುತ್ತಿದ್ದ ಇಬ್ಬರು ವ್ಯಕ್ತಿಗಳ ಮೇಲೆ ಒಣಗಿದ ಮರ ಬಿದ್ದು, ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ.

ಕಾಗಿನೆಲೆ ಗ್ರಾಮದ ಮಹ್ಮದ್ ಗೌಸ್ ಮಹ್ಮದಲಿ ತಿಳವಳ್ಳಿ (27) ಮತ್ತು ಶಾನವಾಜ್ ಅಬ್ದುಲ್ಖಾದರ ಹೊಸಳ್ಳಿ (20) ಮೃತರು. ಇಬ್ಬರೂ ಟ್ರ್ಯಾಕ್ಟರ್ನಲ್ಲಿ ಹೊಲಕ್ಕೆ ಹೋಗುತ್ತಿದ್ದಾಗ ಮಂಜಯ್ಯ ಚಂದ್ರಯ್ಯ ಹಿರೇಮಠ ಎಂಬುವರ ಜಮೀನಿನ ಬಳಿ ಒಣಗಿದ ಮರವೊಂದು ಏಕಾಏಕಿ ಟ್ರ್ಯಾಕ್ಟರ್ ಮೇಲೆ ಬಿದ್ದಿದೆ.

ತೀವ್ರವಾಗಿ ಗಾಯಗೊಂಡಿದ್ದ ಇಬ್ಬರನ್ನೂ ಹಾವೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿ ಕಿಮ್ಸ್ಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ಪೊಲೀಸ್ರು ತಿಳಿಸಿದ್ದಾರೆ.

ಲೋಕೋಪಯೋಗಿ ಮತ್ತು ಅರಣ್ಯ ಇಲಾಖೆಗೆ ಸೇರಿದ ಒಣಗಿದ ಮರ ಬೀಳುವ ಸ್ಥಿತಿಯಲ್ಲಿತ್ತು. ಇದರಿಂದ ಸಾರ್ವಜನಿಕರಿಗೆ ಪ್ರಾಣ ಹಾನಿಯಾಗುವ ಸೂಚನೆಯಿದ್ದರೂ ಮರವನ್ನು ತೆರವುಗೊಳಿಸಿರಲಿಲ್ಲ. ಎರಡೂ ಇಲಾಖೆಯ ಸಿಬ್ಬಂದಿ ನಿರ್ಲಕ್ಷ್ಯತನದಿಂದ ಇಬ್ಬರು ಮೃತಪಟ್ಟಿದ್ದಾರೆ. ಇಲಾಖೆಯ ಮುಖ್ಯಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ಕೈಕೊಳ್ಳವಂತೆ ದೂರು ನೀಡಿದ್ದಾರೆ ಎಂದು ಪೊಲೀಸ್ರು ತಿಳಿಸಿದ್ದಾರೆ.

ಈ ಕುರಿತು ಕಾಗಿನೆಲೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.