‘ಅಪಾಯಕಾರಿ: ಟಂಟಂ ಆಟೊ ಪರಿಶೀಲನೆ’
‘ಹಾವೇರಿ ಜಿಲ್ಲೆಯಲ್ಲಿ ಆಟೊ ಟಂಟಂ ಸೇರಿದಂತೆ ಹಲವು ವಾಹನಗಳಲ್ಲಿ ಪ್ರಯಾಣಿಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ಹತ್ತಿಸಿಕೊಂಡು ಹೋಗುತ್ತಿದ್ದಾರೆ. ಇಂಥ ವಾಹನಗಳ ವಿರುದ್ಧವೂ ಪ್ರಕರಣ ದಾಖಲಿಸಿಕೊಳ್ಳಲಾಗುವುದು’ ಎಂದು ಕೆ.ಟಿ. ಹಾಲಸ್ವಾಮಿ ಹೇಳಿದರು. ‘ಅಪಾಯಕಾರಿ ರೀತಿಯಲ್ಲಿ ಪ್ರಯಾಣಿಕರನ್ನು ಹತ್ತಿಸಿಕೊಂಡು ಹೋಗುವಾಗ ಅನಾಹುತ ಸಂಭವಿಸುವ ಸಾಧ್ಯತೆ ಹೆಚ್ಚಿರುತ್ತದೆ. ಮೋಟಾರು ವಾಹನಗಳ ಕಾಯ್ದೆಯಲ್ಲೂ ಇಂಥ ಪ್ರಯಾಣಕ್ಕೆ ಅವಕಾಶವಿಲ್ಲ’ ಎಂದರು.