ಹಾವೇರಿ: ಬೆಂಗಳೂರು– ಹುಬ್ಬಳ್ಳಿ ಪ್ಯಾಸೆಂಜರ್ ರೈಲಿನಿಂದ ಕೆಳಕ್ಕೆ ಬಿದ್ದು ಪ್ರಜ್ಞೆ ತಪ್ಪಿದ್ದ ಮಹಿಳೆಯನ್ನು ಪ್ರಗತಿಪರ ರೈತ ಶಿವಯೋಗಿ ಬೆನ್ನೂರು ಎಂಬುವರು ರಕ್ಷಿಸಿ, ಮಾನವೀಯತೆ ಮೆರೆದಿದ್ದಾರೆ.

ಇಲ್ಲಿನ ಬಸವೇಶ್ವರನಗರದ ಸಿ ಬ್ಲಾಕ್ಗೆ ಹೊಂದಿಕೊಂಡಿರುವ ಹೊರವಲಯದ ಸಮೀಪ ಗುರುವಾರ ಸಂಜೆ 4.30ರ ಸಮಯದಲ್ಲಿ ಹೊಸಪೇಟೆ ಮೂಲದ ಅನ್ನಪೂರ್ಣ ಎಂಬುವವರು ರೈಲಿನಿಂದ ಕೆಳಕ್ಕೆ ಬಿದ್ದರು. ಆಗ ಅವರ ತಲೆಗೆ ಬಲವಾದ ಪೆಟ್ಟು ಬಿದ್ದಿತ್ತು.ಈ ಸಂದರ್ಭದಲ್ಲಿ ರೈಲ್ವೆಹಳಿಯ ಪಕ್ಕದಲ್ಲಿರುವ ತಮ್ಮ ಹೊಲದಲ್ಲಿ ಬೆಳೆಗಳಿಗೆ ನೀರು ಹಾಯಿಸುತ್ತಿದ್ದ ಶಿವಯೋಗಿ ಬೆನ್ನೂರು ವಿಷಯ ಗೊತ್ತಾಗಿ ಸ್ಥಳಕ್ಕೆ ಬಂದಿದ್ದಾರೆ.

ಖಾಸಗಿ ಓಮಿನಿ ಚಾಲಕನ ಸಹಾಯದಿಂದ ಇಲ್ಲಿನ ಜಿಲ್ಲಾ ಆಸ್ಪತ್ರೆಗೆ ಮಹಿಳೆಯನ್ನು ದಾಖಲಿಸಿ, ಚಿಕಿತ್ಸೆ ಕೊಡಿಸಿದ್ದಾರೆ. ಮಹಿಳೆ ಅಪಾಯದಿಂದ ಪಾರಾಗಿದ್ದಾರೆ ಎಂದು ರೈಲ್ವೆ ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.