ಬುಧವಾರ, ಸೆಪ್ಟೆಂಬರ್ 23, 2020
20 °C

ರಾಣೆಬೆನ್ನೂರು: ಬಸ್‌ ನಿಲ್ದಾಣಕ್ಕೆ ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ರಾಣೆಬೆನ್ನೂರು: ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಭಾನುವಾರ ಸಂಜೆ ನಗರದ ಬಸ್‌ ನಿಲ್ದಾಣಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ನಗರವು ವೇಗವಾಗಿ ಬೆಳೆಯುತ್ತಿದ್ದು, ವಾಹನ ದಟ್ಟಣೆಯೂ ಹೆಚ್ಚಾಗಿದೆ. ಹೀಗಾಗಿ ಬಸ್‌ ನಿಲ್ದಾಣ ಅತ್ಯಂತ ಚಿಕ್ಕದಾಗಿದೆ. ಇದರಿಂದ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗಿದ್ದು, ಅಪಘಾತಗಳೂ ಹೆಚ್ಚಾಗುತ್ತಿವೆ. ದೊಡ್ಡ ಬಸ್‌ ನಿಲ್ದಾಣ ನಿರ್ಮಿಸಿ, ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಇಲ್ಲಿನ ಜನತೆ ಮನವಿ ಮಾಡಿದರು. 

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸಂಚಾರ ದಟ್ಟಣೆ ಹಾಗೂ ಸಾರ್ವಜನಿಕರಿಗೆ ಆಗಿರುವ ಸಮಸ್ಯೆಯನ್ನು ಪರಿಶೀಲಿಸುವ ಸಲುವಾಗಿಯೇ ಇಂದು ಭೇಟಿ ನೀಡಿದ್ದೇನೆ ಎಂದು ತಿಳಿಸಿದರು.

ನಗರದ ಬಸ್‌ ನಿಲ್ದಾಣದ ವ್ಯವಸ್ಥೆ ಬಗ್ಗೆ ಇಲ್ಲಿನ ಸಚಿವ ಆರ್‌.ಶಂಕರ್  ಜೊತೆಗೆ ಚರ್ಚಿಸಿದ್ದೇನೆ. ಅವರು ಈ ಬಗ್ಗೆ ಅನೇಕ ಬಾರಿ ತಿಳಿಸಿದ್ದಾರೆ. ನಗರದ ಹೊರಭಾಗದಲ್ಲಿ ಸೂಕ್ತವಾದ ಸ್ಥಳ ದೊರೆತರೆ, ಸ್ಥಳಾಂತರ ಮಾಡಲಾಗುವುದು ಎಂದು ಭರವಸೆ ನೀಡಿದರು.

ನಿಲ್ದಾಣದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಘಟಕದ ವ್ಯವಸ್ಥಾಪರಿಗೆ ಮತ್ತು ಅಲ್ಲಿನ ಅಧಿಕಾರಿಗಳಿಗೆ ಸೂಚಿಸಿದರು.
ರೈತ ಮುಖಂಡ ಹನುಮಂತ ಕಬ್ಬಾರ, ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಬಸವರಾಜ ಬೆಳಗಾವಿ, ಘಟಕ ವ್ಯವಸ್ಥಾಪಕ ಚೇತನಕುಮಾರ, ನಿಯಂತ್ರಕ ಬಸವರಾಜ ಮೇಗಳಮನಿ, ರಮೇಶ ನಾಯಕ, ಬೋಡಕೆ ಇದ್ದರು.  

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.