ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾವೇರಿ: ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ 21 ಮಂದಿ ಆಯ್ಕೆ

Last Updated 3 ಸೆಪ್ಟೆಂಬರ್ 2022, 15:38 IST
ಅಕ್ಷರ ಗಾತ್ರ

ಹಾವೇರಿ: ಪ್ರಸಕ್ತ 2022-23ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಕಿರಿಯ ಪ್ರಾಥಮಿಕ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ತಲಾ ಏಳು ಶಿಕ್ಷಕರು ಸೇರಿದಂತೆ ಒಟ್ಟು 21 ಶಿಕ್ಷಕರು ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಗದೀಶ್ವರ ತಿಳಿಸಿದ್ದಾರೆ.

ಕಿರಿಯ ಪ್ರಾಥಮಿಕ ಶಾಲಾ ವಿಭಾಗ:

ಬ್ಯಾಡಗಿ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆ ಶಿಕ್ಷಕಿ ಟಿ.ಐ.ಪಠಾಣ, ಹಾನಗಲ್ ತಾಲ್ಲೂಕಿನ ಕಾಮನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಇಂಗಳಗಿ ದಾವಲ್‌ ಮಲಿಕ್‌, ಹಾವೇರಿಯ ನಾಗೇಂದ್ರಮನಮಟ್ಟಿ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆ ನಂ.4ರ ಶಿಕ್ಷಕಿ ಎಸ್.ಎಂ.ಅಕ್ಕಿ, ಹಿರೇಕೆರೂರು ತಾಲ್ಲೂಕು ಹುಲ್ಲತ್ತಿ ಸರ್ಕಾರಿ ಪ್ರಾಥಮಿಕ ಶಾಲೆಯ ಎನ್.ಜಿ.ಬನ್ನಿಮಟ್ಟಿ, ರಾಣೆಬೆನ್ನೂರು ತಾಲ್ಲೂಕು ಹೂಲಿಕಟ್ಟಿ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕಿ ಸುನಂದಾ ವಿ. ಸಾಲಿಮಠ, ಸವಣೂರ ತಾಲ್ಲೂಕು ಯಲವಿಗಿ ತಾಂಡಾದ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕ ಎ.ಪಿ ಅಂಗಡಿ, ಶಿಗ್ಗಾವಿ ತಾಲ್ಲೂಕು ಮಮದಾಪೂರ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕಿ ಮಂಜುಳಾ ಮರಳ್ಳವರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಹಿರಿಯ ಪ್ರಾಥಮಿಕ ಶಾಲಾ ವಿಭಾಗ:

ಬ್ಯಾಡಗಿ ತಾಲ್ಲೂಕಿನ ಹೊಸಶಿಡೇನೂರ ಎಂ.ಪಿ.ಎಸ್. ಶಾಲೆಯ ಶಿಕ್ಷಕ ಎಸ್.ಆರ್. ಶಿಡೇನೂರ, ಹಾನಗಲ್ ತಾಲ್ಲೂಕು ಶಿರಗೋಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಗೌರಮ್ಮ ಪೂಜಾರ, ಹಾವೇರಿ ತಾಲ್ಲೂಕು ಗುತ್ತಲ ಎಚ್.ಪಿ.ಕೆ.ಜಿ.ಎಸ್. ಶಿಕ್ಷಕ ಓ.ಸಿ.ಪಾಟೀಲ, ಹಿರೇಕೆರೂರು ತಾಲ್ಲೂಕಿನ ದೂದಿಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕಿ ಎನ್.ಎಸ್. ಕೋಣನತಲಿ, ರಾಣೆಬೆನ್ನೂರು ತಾಲ್ಲೂಕಿನ ದೇವರಗೊಂಡನಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಆರ್.ಸಿ. ಹಳೇಗೌಡ್ರ, ಸವಣೂರು ತಾಲ್ಲೂಕಿನ ಹೆಸರೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಪಿ. ತಳವಾರ ಹಾಗೂ ಶಿಗ್ಗಾವಿ ತಾಲ್ಲೂಕು ಗೊಟಗೋಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ವಿ.ಎಸ್.ಮಡ್ಲಿಮಠ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಪ್ರೌಢಶಾಲಾ ವಿಭಾಗ:

ಬ್ಯಾಡಗಿ ತಾಲ್ಲೂಕಿನ ಶಿಡೇನೂರ ಡಾ.ಬಿ.ಆರ್. ಅಂಬೇಡ್ಕರ್ ಪ್ರೌಢಶಾಲೆಯ ಶಿಕ್ಷಕ ಶಿವನಾಯ್ಕ್, ಹಾನಗಲ್ ತಾಲ್ಲೂಕಿನ ತಿಳವಳ್ಳಿ ಸಿದ್ಧರಾಮೇಶ್ವರ ಪ್ರೌಢಶಾಲೆ ಶಿಕ್ಷಕ ಬಸವರಾಜ ಎಸ್.ಪಾಟೀಲ, ಹಾವೇರಿ ತಾಲ್ಲೂಕಿನ ನೆಗಳೂರ ಎಂ.ಡಿ.ಆರ್.ಎಸ್.ನ ಶಿಕ್ಷಕ ಮಹಮ್ಮದ್ ಇಸ್ಮಾಯಿಲ್, ಹಿರೇಕೆರೂರು ಸರ್ಕಾರಿ ಉರ್ದು ಪ್ರೌಢಶಾಲೆಯ ಶಿಕ್ಷಕ ರವಿ ವಡ್ಡರ, ರಾಣೆಬೆನ್ನೂರು ತಾಲ್ಲೂಕಿನ ಗಂಗಾಪೂರ ಸರ್ಕಾರಿ ಪ್ರೌಢಶಾಲೆ ಶಿಕ್ಷಕ ಕಮಲಾಕರ ಮರಡೇರ, ಸವಣೂರ ತಾಲ್ಲೂಕಿನ ಕುಣಿಮೆಳ್ಳಿಹಳ್ಳಿ ಸರ್ಕಾರಿ ಪ್ರೌಢಶಾಲೆ ಶಿವಾನಂದ ಎಫ್.ಪುರದ ಹಾಗೂ ಶಿಗ್ಗಾಂವ ಸರ್ಕಾರಿ ಉರ್ದು ಪ್ರೌಢಶಾಲೆ ಎಂ.ಎಸ್.ಲಂಗೋಟಿ ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT