ಹಾವೇರಿ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣ ಮತ್ತು ಕಡಿಮೆ ಅಂಕ ಬಂದವು ಎಂಬ ಕಾರಣಗಳಿಂದ ಜಿಲ್ಲೆಯಲ್ಲಿ ಇಬ್ಬರು ವಿದ್ಯಾರ್ಥಿನಿಯರು ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹಾವೇರಿ ನಗರದ ದ್ಯಾಮವ್ವನಗುಡಿ ಓಣಿಯ ವೈಷ್ಣವಿ ರಿತ್ತಿ (16) ಎಂಬ ವಿದ್ಯಾರ್ಥಿನಿ ಗಣಿತ ವಿಷಯದಲ್ಲಿ ಅನುತ್ತೀರ್ಣಗೊಂಡ ಕಾರಣ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಹಾವೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬ್ಯಾಡಗಿ ತಾಲ್ಲೂಕಿನ ಕಾಶಂಬಿ ಗ್ರಾಮದ ಭಾರತಿ ಕೋಟಿ (16) ಎಂಬ ವಿದ್ಯಾರ್ಥಿನಿ ಕಡಿಮೆ ಅಂಕ (ಶೇ 61.6) ಬಂದಿವೆ ಎಂಬ ಕಾರಣದಿಂದ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಆಕೆಯನ್ನು ತಕ್ಷಣ ಪಾಲಕರು ಹಾವೇರಿ ಜಿಲ್ಲಾಸ್ಪತ್ರೆಗೆ ಕರೆದೊಯ್ದಿದ್ದಾರೆ. ಚಿಕಿತ್ಸೆಗೆ ಸ್ಪಂದಿಸದೆ ಆಕೆ ಮೃತಪಟ್ಟಿದ್ದಾಳೆ.ಕಾಗಿನೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.