ರಟ್ಟೀಹಳ್ಳಿ: ಮುಂದಿನ ಭವಿಷ್ಯಕ್ಕಾಗಿ ಪಾಲಕರು ತಮ್ಮ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಗ್ರಾಮೀಣ ಭಾಗದಲ್ಲಿನ ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸಲು ಸಾರ್ವಜನಿಕರು ಸಹಕರಿಸಬೇಕು ಎಂದು ಶಾಸಕ ಯು.ಬಿ.ಬಣಕಾರ ಹೇಳಿದರು.

ತಾಲ್ಲೂಕಿನ ಕುಡಪಲಿ ಗ್ರಾಮದಲ್ಲಿ ವಿವಿಧ ಯೋಜನೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಮೂರು ಶಾಲಾ ಕೊಠಡಿ ಹಾಗೂ ನರೇಗಾ ಯೋಜನೆಯಲ್ಲಿ ನಿರ್ಮಿಸಲಾದ ಅಡುಗೆ ಕೊಠಡಿಯನ್ನು ಗುರುವಾರ ಉದ್ಘಾಟಿಸಿ ಬಳಿಕ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಈಗಾಗಲೇ ರಾಜ್ಯದ ಪ್ರತಿ ಸರ್ಕಾರಿ ಶಾಲೆಗೆ ಉಚಿತ ವಿದ್ಯುತ್ ಸಂಪರ್ಕ ಹಾಗೂ ಕುಡಿಯುವ ನೀರಿನ ಸೌಲಭ್ಯವನ್ನು ಕಲ್ಪಿಸಲಾಗುವುದೆಂದು ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ. ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟವನ್ನು ಸುಧಾರಿಸಲು ಶಿಕ್ಷಕರು ಶ್ರಮವಹಿಸಬೇಕು ಎಂದರು.

ಬಿಇಒ ಎನ್ ಶ್ರೀಧರ, ಗ್ರಾಮ ಪಂಚಾಯ್ತಿ ಅಧ್ಯಕ್ಷ ಮಹೇಶ್ವರಗೌಡ ಚಿಗ್ಗೌಡ್ರ, ಸದಸ್ಯ ಮಂಜನಗೌಡ ಗುಳದಳ್ಳಿ, ಮಾಜಿ ತಾ.ಪಂ. ಅಧ್ಯಕ್ಷ ಹೇಮಣ್ಣ ಮುದರಡ್ಡೇರ, ತಾ.ಪಂ. ಇಒ ಟಿ.ಆರ್.ಮಲ್ಲಾಡದ, ಎನ್. ಸುರೇಶಕುಮಾರ, ಜಿ.ಜಿ. ನಾಯಕ್, ಗ್ರಾ.ಪಂ. ಉಪಾಧ್ಯಕ್ಷೆ ಜಯಮ್ಮ ಗಾಳೆಮ್ಮನವರ, ಎಸ್.ಡಿ.ಎಂ.ಸಿ. ಅಧ್ಯಕ್ಷ ಶರಣಪ್ಪ ರಾಮಗಿರಿ, ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.