ಹಾವೇರಿ: ಜಿಲ್ಲೆಯ ಕೋವಿಡ್ ವಾರಿಯರ್ಗಳಿಗೆ ಜ.16ರಿಂದ ಮೊದಲ ಸುತ್ತಿನ ಕೋವಿಡ್ ಲಸಿಕೆ ಹಾಕುವ ಕಾರ್ಯಕ್ರಮ ಆರಂಭವಾಗಲಿದೆ. ಲೋಪವಾಗದಂತೆ ಮಾರ್ಗಸೂಚಿ ಅನ್ವಯ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಬೆಳಗಾವಿಯ ಪ್ರಾದೇಶಿಕ ಲಸಿಕಾ ಕೇಂದ್ರದಿಂದ ರಸ್ತೆ ಮೂಲಕ ವಿಶೇಷ ಸುರಕ್ಷಿತ ವಾಹನದಲ್ಲಿ ಬುಧವಾರ ರಾತ್ರಿ ಹಾವೇರಿಗೆ ಬಂದಿರುವ ಲಸಿಕಾ ಪೆಟ್ಟಿಗೆಗಳನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಆವರಣದಲ್ಲಿರುವ ಜಿಲ್ಲಾ ಲಸಿಕಾ ಉಗ್ರಾಣದಲ್ಲಿ ಸಂಗ್ರಹಿಸಿ ಇಡಲಾಗುತ್ತದೆ ಎಂದು ತಿಳಿಸಿದರು.

ಮೊದಲ ಹಂತದಲ್ಲಿ 4,000 ಲಸಿಕೆ ಜಿಲ್ಲೆಗೆ ಬಂದಿದೆ. ಮೊದಲ ಸುತ್ತಿನ ಲಸಿಕಾಕರಣದಲ್ಲಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಿಂದ ಈಗಾಗಲೇ ನೋಂದಾಯಿತರಾಗಿರುವ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ಆರೋಗ್ಯ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು ಸೇರಿ ಸುಮಾರು 8691 ಮಂದಿಗೆ ಲಸಿಕೆಯನ್ನು ನೀಡಲಾಗುತ್ತದೆ ಎಂದು ತಿಳಿಸಿದರು.

ಗುರುತಿನ ಚೀಟಿ ಕಡ್ಡಾಯ:

ಲಸಿಕಾ ಕೇಂದ್ರಗಳಲ್ಲಿ ಅಗತ್ಯ ಕೊಠಡಿ, ಸಿಬ್ಬಂದಿ, ತುರ್ತು ನಿಗಾ ಘಟಕ ಸೇರಿದಂತೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಹಾಗೂ ಮೊದಲ ಹಂತದಲ್ಲಿ ‘ಡಿ’ ಗ್ರೂಪ್ ಸಿಬ್ಬಂದಿಗೆ ನೀಡಬೇಕು. ಆರು ಅಡಿ ಅಂತರ ಕಾಯ್ದುಕೊಳ್ಳಬೇಕು. ವ್ಯಾಕ್ಸಿನ್ ಪಡೆಯಲು ಗುರುತಿನ ಚೀಟಿ ಕಡ್ಡಾಯವಾಗಿದೆ. ವ್ಯಾಕ್ಸಿನ್ ನೀಡಿಕೆ ನಂತರ 30 ನಿಮಿಷ ನಿಗಾ ಘಟಕದಲ್ಲಿ ಇರಿಸಬೇಕು. ಅಧಿಕಾರಿಗಳು ಸೇರಿದಂತೆ ಅಗತ್ಯ ಸಿಬ್ಬಂದಿ ಹಾಗೂ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಬೇಕು. ವಿದ್ಯುತ್ ವ್ಯತ್ಯಯವಾಗದಂತೆ ಕ್ರಮವಹಿಸಬೇಕು ಹಾಗೂ ಲಸಿಕೆ ನೀಡಿಕೆಯಲ್ಲಿ ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚನೆ ನೀಡಿದರು.

ಆರ್.ಸಿ.ಎಚ್. ಅಧಿಕಾರಿ ಡಾ.ಜಯಾನಂದ ಮಾತನಾಡಿ, 46 ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದೆ. ಬ್ಯಾಡಗಿ ತಾಲೂಕಿನ ಬ್ಯಾಡಗಿ, ಕಾಗಿನೆಲೆ, ಕದರಮಂಡಲಗಿ, ಶಂಕ್ರಿಕೊಪ್ಪ ಹಾಗೂ ಚಿಕ್ಕಬ್ಬಾರ ಆರೋಗ್ಯ ಕೇಂದ್ರಗಳಲ್ಲಿ ಹಾಗೂ ಹಾನಗಲ್ ತಾಲ್ಲೂಕಿನ ಹಾನಗಲ್, ಅಕ್ಕಿಆಲೂರು ಹಾಗೂ ಕುಸನೂರ ಆರೋಗ್ಯ ಕೇಂದ್ರಗಳಲ್ಲಿ ಜ.16ರಿಂದ 18ರವರೆಗೆ ಲಸಿಕೆ ಕಾರ್ಯಕ್ರಮ ನಡೆಯಲಿದೆ ಎಂದರು.

ಹಾವೇರಿ ತಾಲ್ಲೂಕಿನ ಹಾವೇರಿ, ಗುತ್ತಲ, ಅಗಡಿ, ದೇವಗಿರಿ, ಕರ್ಜಗಿ, ದೇವಿಹೊಸೂರು, ಹಾವನೂರು, ಕಾಟೇನಹಳ್ಳಿ, ಕುರುಬಗೊಂಡ, ಹಂದಿಗನೂರು, ಹೊಸರಿತ್ತಿ, ನೆಗಳೂರು ಹಾಗೂ ಕಬ್ಬೂರ ಆರೋಗ್ಯ ಕೇಂದ್ರಗಳಲ್ಲಿ ಜನವರಿ 16, ಜ.18, ಜ.19 ಹಾಗೂ 20ರವರೆಗೆ ನಡೆಯಲಿದೆ.

ಹಿರೇಕೆರೂರು ತಾಲ್ಲೂಕಿನ ಹಿರೇಕೆರೂರು, ರಟ್ಟಿಹಳ್ಳಿ, ಮಾಸೂರು, ಕೋಡ, ಹೊಂಬರಡಿ, ಚಿಕ್ಕೇರೂರು, ತಡಕನಹಳ್ಳಿ ಹಾಗೂ ಕುಡಪಲಿ ಆರೋಗ್ಯ ಕೇಂದ್ರಗಳಲ್ಲಿ ಜ.16 ರಿಂದ 18ರವರೆಗೆ ಹಾಗೂ ರಾಣೆಬೆನ್ನೂರು ತಾಲ್ಲೂಕಿನ ರಾಣೆಬೆನ್ನೂರು, ಮೆಡ್ಲೇರಿ, ಹಲಗೇರಿ, ಸುಣಕಲ್ಲಬಿದರಿ, ಹೊನ್ನತ್ತಿ, ಮಾಕನೂರು ಆರೋಗ್ಯ ಕೇಂದ್ರಗಳಲ್ಲಿ ಜ.18, ಜ.20 ಹಾಗೂ ಜ22ರಂದು ನಡೆಯಲಿದೆ.

ಸವಣೂರ ತಾಲ್ಲೂಕಿನ ಸವಣೂರು ಸಾರ್ವಜನಿಕ ಆಸ್ಪತ್ರೆ ಹಾಗೂ ಉಪ ಆರೋಗ್ಯ ಕೇಂದ್ರ ಮತ್ತು ಹತ್ತಿಮತ್ತೂರು ಕೇಂದ್ರದಲ್ಲಿ ಜನವರಿ 16 ರಿಂದ 18ರವರೆಗೆ, ನಡೆಯಲಿದೆ. ಶಿಗ್ಗಾವಿ ತಾಲ್ಲೂಕಿನ ಶಿಗ್ಗಾವಿ, ಬಂಕಾಪುರ, ತಡಸ, ದುಂಡಶಿ, ಅತ್ತಿಗೇರಿ ಆರೋಗ್ಯ ಕೇಂದ್ರಗಳಲ್ಲಿ ಜ.16ರಿಂದ 18ರವರೆಗೆ ಲಸಿಕೆ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಂದ್ರ ದೊಡ್ಮನಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಪಿ.ಆರ್. ಹಾವನೂರ, ತಹಶೀಲ್ದಾರ್ ಶಂಕರ, ತಾಲ್ಲೂಕು ಆರೋಗ್ಯಾಧಿಕಾರಿಗಳು ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.