ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹಾವೇರಿ ನೂತನ ಜಿಲ್ಲಾಧಿಕಾರಿಯಾಗಿ ವಿಜಯಮಹಾಂತೇಶ ನೇಮಕ

Published 5 ಜುಲೈ 2024, 3:14 IST
Last Updated 5 ಜುಲೈ 2024, 3:14 IST
ಅಕ್ಷರ ಗಾತ್ರ

ಹಾವೇರಿ: ಹಾವೇರಿಯ ಜಿಲ್ಲಾಧಿಕಾರಿಯಾಗಿ ವಿಜಯಮಹಾಂತೇಶ ದಾನಮ್ಮನವರ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸದ್ಯ ಜಿಲ್ಲಾಧಿಕಾರಿ ಆಗಿದ್ದ ರಘುನಂದನಮೂರ್ತಿ ಅವರನ್ನು ಬೆಂಗಳೂರು ಖಜಾನೆ ಆಯುಕ್ತರಾಗಿ ವರ್ಗಾವಣೆ ‌ಮಾಡಲಾಗಿದೆ.

ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳ ನಿರ್ದೇಶಕರಾಗಿದ್ದ ವಿಜಯಮಹಾಂತೇಶ ಅವರನ್ನು ಹಾವೇರಿ ಜಿಲ್ಲಾಧಿಕಾರಿ ಆಗಿ ವರ್ಗಾವಣೆ ಮಾಡಲಾಗಿದೆ.

ನೂತನ ಜಿಲ್ಲಾಧಿಕಾರಿ ಅವರು ಶುಕ್ರವಾರವೇ ಅಧಿಕಾರ ಸ್ವೀಕರಿಸುವ ಸಾಧ್ಯತೆ ಇದೆ.

ವಿಜಯಮಹಾಂತೇಶ ಅವರು ಈ ಹಿಂದೆ ವಿಜಯಪುರ ಜಿಲ್ಲಾಧಿಕಾರಿಯಾಗಿ ಕೆಲಸ ಮಾಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT