ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶರಣರ ನುಡಿಯಂತೆ ನಡೆಯಿರಿ:

Last Updated 17 ಸೆಪ್ಟೆಂಬರ್ 2020, 11:26 IST
ಅಕ್ಷರ ಗಾತ್ರ

ಸವಣೂರ: ಶರಣರ ಆದರ್ಶಗಳನ್ನು ಪಾಲಿಸಬೇಕು ಎಂದು ತಹಶೀಲ್ದಾರ್ ಮಲ್ಲಿಕಾರ್ಜುನ ಹೆಗ್ಗನ್ನವರ ತಿಳಿಸಿದರು.

ಪಟ್ಟಣದ ಕಂದಾಯ ಇಲಾಖೆ ಸಭಾಂಗಣದಲ್ಲಿ ವಿಶ್ವಕರ್ಮರ ಜಯಂತಿ ಅಂಗವಾಗಿ ಶ್ರೀ ವಿರಾಟ ವಿಶ್ವಕರ್ಮರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು. ಶರಣರ ನಾಡು ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಕನ್ನಡ ನಾಡಿನಲ್ಲಿ ಜನಿಸಿರುವುದು ಪೂರ್ವ ಜನ್ಮದ ಪುಣ್ಯ. ಅದನ್ನು ಅರಿತುಕೊಂಡು ಶರಣರ ನುಡಿಯಂತೆ ನಡೆಯಬೇಕು. ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಕೋವಿಡ್ ಕಾರಣ ಶರಣರ ಜಯಂತಿ ಕಾರ್ಯಕ್ರಮಗಳನ್ನು ಸರಳವಾಗಿ ಆಚರಿಸಲಾಗುತ್ತಿದೆ. ಇದರ ಹತೋಟಿಗೆ ಪ್ರತಿಯೊಬ್ಬರೂ ಸಹಕರಿಸಬೇಕು. ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಪ್ರತಿಯೊಬ್ಬರೂ ಅಂತರ ಕಾಪಾಡಿಕೊಳ್ಳಬೇಕು. ಸ್ಯಾನಿಟೈಸರ್ ಬಳಸಬೇಕು ಎಂದು ಹೇಳಿದರು.

ವಿಶ್ವಕರ್ಮ ಸಮಾಜದ ತಾಲ್ಲೂಕು ಘಟಕ ಅಧ್ಯಕ್ಷ ಪೂರ್ವಾಚಾರಿ ಬಡಿಗೇರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮೋಹನ ಮೆಣಸಿನಕಾಯಿ, ಚಿದಾನಂದ ಬಡಿಗೇರ, ಮಹೇಂದ್ರ ಬಡಿಗೇರ, ಈಶ್ವರ ಅರ್ಕಸಾಲಿ, ದಾನಪ್ಪ ಬಡಿಗೇರ, ಪ್ರವೀಣ ಅರ್ಕಸಾಲಿ, ಮೌನೇಶ ಬಡಿಗೇರ, ಗಂಗಪ್ಪ ಕನ್ನೂರ,ಬಸವಂತಪ್ಪ ಬಡಿಗೇರ, ಬಿಜೆಪಿ ತಾಲ್ಲೂಕು ಘಟಕ ಅಧ್ಯಕ್ಷ ಗಂಗಾದರ ಬಾಣದ, ಮಲ್ಲಾರಪ್ಪ ತಳ್ಳಿಹಳ್ಳಿ, ಕರವೇ ತಾಲ್ಲೂಕು ಘಟಕ ಅಧ್ಯಕ್ಷ ಪರಶುರಾಮ ಈಳಗೇರ, ರಾಮಣ್ಣ ಅಗಸರ, ಚಂದ್ರಹಾಸ ಈಳಗೇರ, ಜಗದೀಶ ಈಳಗೇರ, ನಾಗರತ್ನ ಈಳಗೇರ, ಪ್ರಸಾದ ಈಳಗೇರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT