ಗುತ್ತಲ ಬಯಲು ಶೌಚಮುಕ್ತ ಎಂದು ?

7

ಗುತ್ತಲ ಬಯಲು ಶೌಚಮುಕ್ತ ಎಂದು ?

Published:
Updated:
Deccan Herald

 ಗುತ್ತಲ: ಪಟ್ಟಣದ ಹಾವನೂರ ರಸ್ತೆಯಲ್ಲಿ ಸಾರ್ವಜನಿಕ ಶೌಚಾಲಯ ಇಲ್ಲದ ಕಾರಣ ಮಹಿಳೆಯರು ಬಯಲು ಶೌಚಕ್ಕೆ ಹೋಗಲು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ.

‘ರಾಣೆಬೆನ್ನೂರು ರಸ್ತೆಯಲ್ಲಿ ಸಾರ್ವಜನಿಕ ಶೌಚಾಲಯ ಇದ್ದರೂ ಅದನ್ನು ಬಳಕೆ ಮಾಡಲು ಆಗುವುದಿಲ್ಲ. ಶೌಚಾಲಯದ ಸುತ್ತ ತಡಗೋಡೆ ಇಲ್ಲ. ವಿದ್ಯುತ್ ಸಂಪರ್ಕ ಹಾಗೂ ಸ್ವಚ್ಛತೆ ಇಲ್ಲದ ಕಾರಣ ಅನಿವಾರ್ಯವಾಗಿ ಬಯಲು ಹುಡುಕಿಕೊಂಡು ಹೋಗಬೇಕಾಗಿದೆ’ ಎನ್ನುತ್ತಾರೆ ಗಲ್ಲಿಯ ನಿವಾಸಿ ದುರಗಮ್ಮ ಇಟಗಿ.

‘ಬಯಲಿನಲ್ಲಿ ಶೌಚಕ್ಕೆ ಹೋಗಲು ಹಿಂಸೆಯಾಗುತ್ತದೆ. ವಾಹನಗಳ ಭರಾಟೆಯ ನಡುವೆಯೇ ಚೊಂಬು ಹಿಡಿದುಕೊಂಡು ರಸ್ತೆ ದಾಟಬೇಕು. ಹಾವನೂರ ರಸ್ತೆಯಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಿಸಿದರೆ ಸ್ವಲ್ಪ ಸಮಸ್ಯೆ ಬಗೆಹರಿಯಬಹುದು’ ಎಂದು ಶಾರವ್ವ ಸುಣಗಾರ ಹೇಳುತ್ತಾರೆ.

 ‘ಬಯಲು ಬಹಿರ್ದೆಸೆ ಮುಕ್ತ ಪಟ್ಟಣ ಮಾಡಲು ಲಕ್ಷಾಂತರ ರೂಪಾಯಿ ಖರ್ಚು ಮಾಡಲಾಗುತ್ತಿದೆ. ಕೇಂದ್ರ, ರಾಜ್ಯ ಸರ್ಕಾರದಿಂದ ಇದಕ್ಕಾಗಿ ಅನುದಾನ ಬರುತ್ತಿದೆ ಎಂದು ಹೇಳುತ್ತಾರೆ. ಈ ಹಣದಲ್ಲಿ ಪಟ್ಟಣದಲ್ಲಿ ಅಗತ್ಯ ಇರುವ ಕಡೆ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಾಣ ಮಾಡಲು ಏನು ಸಮಸ್ಯೆ’ ಎಂದು ಮಹಿಳೆಯರು ಕೇಳುತ್ತಾರೆ.

ಬಳಕೆ ಮಾಡದ ಮಹಿಳೆಯರು

ರಾಣೆಬೆನ್ನೂರು ರಸ್ತೆಯಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಾಣ ಮಾಡಲಾಗಿದೆ. ಆದರೆ, ಮಹಿಳೆಯರು ಇದನ್ನು ಸರಿಯಾಗಿ ಬಳಸಿಕೊಳ್ಳುತ್ತಿಲ್ಲ. ಸ್ವಚ್ಛತೆ ಕಾಪಾಡುತ್ತಿಲ್ಲ. ಹಾವನೂರ ರಸ್ತೆಯಲ್ಲಿ ಶೌಚಾಲಯ ನಿರ್ಮಾಣಕ್ಕೆ ಸ್ಥಳದ ಕೊರತೆ ಇದೆ ಎಂದು ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಧರಣೇಂದ್ರಕುಮಾರ ತಿಳಿಸಿದರು.

 

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !