ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಂಗಭದ್ರಾ ನದಿಗೆ ನೀರು: ನಿಟ್ಟುಸಿರುಬಿಟ್ಟ ಗ್ರಾಮಸ್ಥರು

Published 23 ಫೆಬ್ರುವರಿ 2024, 16:19 IST
Last Updated 23 ಫೆಬ್ರುವರಿ 2024, 16:19 IST
ಅಕ್ಷರ ಗಾತ್ರ

ಗುತ್ತಲ: ತುಂಗಭದ್ರಾ ನದಿಗೆ ನೀರು ಬಿಡಲಾಗಿದ್ದು, ತಿಂಗಳದಿಂದ ಕುಡಿಯುವ ನೀರಿಗೆ ತೊಂದರೆ ಅನುಭವಿಸಿದ ಹಾವೇರಿ ನಗರ ಸೇರಿದಂತೆ 100 ಕ್ಕೂ ಅಧಿಕ ಗ್ರಾಮಗಳ ಜನರು ನಿಟ್ಟುಸಿರು ಬಿಟ್ಟಿದ್ದಾರೆ.

ತುಂಗಭದ್ರಾ ನದಿ ಒಂದು ತಿಂಗಳದಿಂದ ಸಂಪೂರ್ಣವಾಗಿ ಖಾಲಿಯಾಗಿದ್ದು, ಹಾವೇರಿ ಮತ್ತು ಗುತ್ತಲ ನಗರ ಸೇರಿದಂತೆ ತುಂಗಭದ್ರಾ ನದಿಯ ದಡದಲ್ಲಿರುವ ಎಲ್ಲ ಗ್ರಾಮಗಳಿಗೆ ನೀರು ಪೂರೈಕೆ ಸಂಪೂರ್ಣ ಸ್ಥಗಿತಗೊಳಿಸಲಾಗಿತ್ತು.ಕುಡಿಯುವ ನೀರಿಗಾಗಿ ಖಾಸಗಿ ಕೊಳವೆ ಬಾವಿ ಮತ್ತು ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗಿತ್ತು. ಅವಶ್ಯಕತೆ ಇದ್ದ ಕಡೆ ಕೊಳವೆ ಬಾವಿಯನ್ನು ಕೊರೆಸಿ ಕುಡಿಯುವ ನೀರಿನ ಬವಣೆ ನೀಗಿಸಲು ಜಿಲ್ಲಾಡಳಿತ ಮತ್ತು ಗ್ರಾಮ ಪಂಚಾಯಿತಿ ಪ್ರಯತ್ನ ಮಾಡಿತ್ತು.ಆದರೂ ಕೆಲ ಕಡೆ ಕುಡಿಯುವ ನೀರಿನ ತೊಂದರೆ ಎದುರಾಗಿದೆ.

ತುಂಗಭದ್ರಾ ನದಿ ಆಶ್ರಿತ ಹಾವೇರಿ ಜಿಲ್ಲೆಯ ಸಾವಿರಾರು ಹೆಕ್ಟೇರ್‌ ಪ್ರದೇಶದಲ್ಲಿ ಭತ್ತ, ಕಬ್ಬು ಮತ್ತು ತರಕಾರಿ ಬೆಳೆಗಳು ಸಂಪೂರ್ಣ ನಾಶವಾಗಿವೆ. ರೈತರು ಬೆಳೆಗಳನ್ನು ಹಾಳು ಮಾಡಿಕೊಂಡು ಸಂಕಷ್ಟ ಅನುಭಸುತ್ತಿದ್ದಾರೆ. ಅಲ್ಪಸ್ವಲ್ಪ ಉಳಿದ ಬೆಳೆ ರಕ್ಷಣೆಗೆ ತುಂಗಭದ್ರಾ ನದಿಗೆ ನೀರು ಬಂದಿರುವದು ಹರ್ಷ ತಂದಿದೆ ಎಂದು ತುಂಗಭದ್ರಾ ನದಿಯ ಆಶ್ರಿತ ರೈತರು ‘ಪ್ರಜಾವಾಣಿ’ಗೆ ತಿಳಿಸಿದರು.

‘ಭದ್ರಾ ಜಲಾಶಯದಿಂದ ಫೆ.5 ರಿಂದ ಈವರೆಗೆ 50 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ’ ಎಂದು ಭದ್ರಾ ಜಲಾಶಯದ ಅಧಿಕಾರಿಗಳು ತಿಳಿಸಿದ್ದಾರೆ.

‘ಕುಡಿಯುವ ನೀರಿಗೆ ಜನ ಹೆಚ್ಚು ಪ್ರಾಮುಖ್ಯತೆ ನೀಡಬೇಕು. ಕುಡಿಯುವ ನೀರಿಗಾಗಿ ಕಂಚಾರಗಟ್ಟಿ ಗ್ರಾಮದ ಹತ್ತಿರ ನದಿಗೆ ಅಡ್ಡಲಾಗಿ ₹7.5 ಲಕ್ಷ ಅನುದಾನದಲ್ಲಿ ಮರಳಿನ ಚೀಲ ಹಚ್ಚಲಾಗಿದೆ. ನದಿಗೆ  ಶಾಶ್ವತವಾಗಿ ಅಡ್ಡಲಾಗಿ ಗೋಡೆ ನಿರ್ಮಾಣಕ್ಕೆ ಎಲ್ಲ ಪ್ರಯತ್ನ ಮಾಡಲಾಗುತ್ತಿದೆ. ಶೀಘ್ರದಲ್ಲಿ ಪರಿಹಾರ ದೊರಕಲಿದೆ’ ಎಂದು ನಗರಸಭಾ ಮಾಜಿ ಅಧ್ಯಕ್ಷ ಸಂಜೀವಕುಮಾರ ನೀರಲಗಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT