ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮಾಸ್ಕ್‌ ಧರಿಸಿ, ಕೋವಿಡ್‌ ದೂರವಿಡಿ’

ಕೋವಿಡ್‌ ಜನಾಂದೋಲನ ಅಭಿಯಾನಕ್ಕೆ ನ್ಯಾ.ರೇಣುಕಾದೇವಿ ಚಾಲನೆ
Last Updated 17 ಅಕ್ಟೋಬರ್ 2020, 14:10 IST
ಅಕ್ಷರ ಗಾತ್ರ

ಹಾವೇರಿ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಿವಿಧ ಇಲಾಖೆಗಳ ಸಹಯೋಗದದಲ್ಲಿ ಕೋವಿಡ್-19ರ ಜನಾಂದೋಲನ ಅಭಿಯಾನಕ್ಕೆ ಶನಿವಾರ ಬೆಳಿಗ್ಗೆ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರಾದ ಎಸ್.ಎಚ್ ರೇಣುಕಾದೇವಿ ಹಾಗೂ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಚಾಲನೆ ನೀಡಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಕೋವಿಡ್-19 ಜನಾಂದೋಲನ ಅಭಿಯಾನದ ಜಾಗೃತಿ ವಾಹನಗಳಿಗೆ, ಜಾಥಾ ಹಾಗೂ ಮಾಸ್ಕ್ ವಿತರಣೆಗೆ ಚಾಲನೆ ನೀಡಿದರು.

ಪ್ರಧಾನ ಮತ್ತು ಜಿಲ್ಲಾ ಸೆಷನ್ಸ್‌ ನ್ಯಾಯಾಧೀಶರಾದ ಎಸ್.ಎಚ್ ರೇಣುಕಾದೇವಿ ಅವರು, ‘ನಾನು ಮತ್ತು ನನ್ನ ಸಹೊದ್ಯೋಗಿಗಳಿಗೆ ಕೋವಿಡ್ ವೈರಾಣು ಹರಡುವುದನ್ನು ತಡೆಯಲು ಸದಾ ಎಚ್ಚರಿಕೆಯಿಂದ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತೇನೆ. ಯಾವಾಗಲೂ ಹಾಗೂ ಸಾರ್ವಜನಿಕರೊಡನೆ ಇರುವಾಗ ಮಾಸ್ಕ್‌ ಧರಿಸುತ್ತೇನೆ. ಕನಿಷ್ಟ ಆರು ಅಡಿ ಅಂತರ ಕಾಯ್ದುಕೊಳ್ಳುತ್ತೇನೆ. ಆಗಾಗ ಸೋಪು ಮತ್ತು ನೀರಿನಿಂದ ಕೈತೊಳೆಯುತ್ತೇನೆ. ಒಟ್ಟಾಗಿ ಕೋವಿಡ್-19 ವಿರುದ್ಧ ಹೋರಾಟದಲ್ಲಿ ಜಯಗಳಿಸೋಣ ಎಂಬ ಪ್ರತಿಜ್ಞಾ ವಿಧಿ ಭೋದಿಸಿದರು.

ಜಿಲ್ಲಾ ನ್ಯಾಯಾಲಯದ ಆವರಣದಿಂದ ವಕೀಲರು ಹಾಗೂ ಅಧಿಕಾರಿಗಳು ನಾಲ್ಕು ತಂಡಗಳಾಗಿ ನಗರದ ವಿವಿಧ ಬಿದಿಗಳಲ್ಲಿ ಕಾಲ್ನಡಿಗೆ ಜಾಥಾದಲ್ಲಿ ತೆರಳಿ ಕೋವಿಡ್ ಬಗ್ಗೆ ಜಾಗೃತಿ ಮೂಡಿಸಿದರು.ಮಾಸ್ಕ್ ಇಲ್ಲದೇ ಓಡಾಡುವರಿಗೆ ಮಾಸ್ಕ್ ನೀಡಿ ಕಡ್ಡಾಯವಾಗಿ ಮಾಸ್ಕ್ ಧರಿಸಿ ಓಡಾಡಿ ಕೋವಿಡ್‍ನಿಂದ ದೂರ ಉಳಿಯುವಂತೆ ಅರಿವು ಮೂಡಿಸಿದರು.

ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶ ಕಿರಣ.ಕೆ, ಹಿರಿಯ ಸಿವಿಲ್ ನ್ಯಾಯಾಧೀಶ ಎ.ವಿ ಪಾಟೀಲ, ಹೆಚ್ಚುವರಿ ಸಿವಿಲ್ ನ್ಯಾಯಧೀಶ ವಿ.ಆರ್ ಗುಡಿ, ಪ್ರಧಾನ ಸಿವಿಲ್ ನ್ಯಾಯಧೀಶರು ಹಾಗೂ ಜೆ.ಎಂ.ಎಫ್.ಸಿ ಲಕ್ಷ್ಮೀ ಎನ್.ಗರಗ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ನಾಸಿರಾ ಬಾನು, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಯೋಗೇಶ್ವರ, ಪ್ರಭಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಯಾನಂದ, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಕೆ.ಸಿ ಪಾವಲಿ ಮತ್ತು ಪ್ರದಾನ ಕಾರ್ಯದರ್ಶಿ ಸಿ.ಎಂ ಬೆನ್ನೂರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT