‘ಕಾಂಗ್ರೆಸ್ ಕಾರ್ಯಕರ್ತರಿಗೆ ಮೋಸ’
‘ಒಂದು ದಿನವೂ ಕಾಂಗ್ರೆಸ್ ಪಕ್ಷದ ಬಾವುಟ ಹಿಡಿಯದೇ ವಲಸೆ ಬಂದವರಿಗೆ ಟಿಕೆಟ್ ನೀಡುವ ಮೂಲಕ ಸಾಮಾನ್ಯ ಕಾರ್ಯಕರ್ತರಿಗೆ ಮೋಸ ಮಾಡಲಾಗಿದೆ’ ಎಂದು ಟಿಕೆಟ್ ಆಕಾಂಕ್ಷಿಯೂ ಆಗಿದ್ದ ಕೆಪಿಸಿಸಿ ಪದವೀಧರರ ಘಟಕದ ರಾಜ್ಯ ಕಾರ್ಯದರ್ಶಿ ರಾಘವೇಂದ್ರ ಬಾಸೂರು ಬಹಿರಂಗವಾಗಿ ಕಿಡಿಕಾರಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ‘10 ಸಾವಿರಕ್ಕೂ ಹೆಚ್ಚು ಮತದಾರರ ನೋಂದಣಿ ಮಾಡಿಸಿದ್ದೇನೆ. ಪಕ್ಷದ ಎಲ್ಲ ಹೋರಾಟ ಪ್ರತಿಭಟನೆ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದೇನೆ. ಈಗ ವಲಸಿಗರಿಗೆ ಟಿಕೆಟ್ ನೀಡಿರುವುದು ಖಂಡನೀಯ. ಅಭ್ಯರ್ಥಿಯನ್ನು ಬದಲಾವಣೆ ಮಾಡಬೇಕು’ ಎಂದು ಒತ್ತಾಯಿಸಿದ್ದಾರೆ.