ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮಸ್ಯೆ ನಿವಾರಣೆಗೆ ಇಚ್ಛಾಶಕ್ತಿ ಅಗತ್ಯ: ಎಪಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನ ಹಾವೇರಿ

ಹೇಳಿಕೆ
Last Updated 21 ನವೆಂಬರ್ 2021, 15:41 IST
ಅಕ್ಷರ ಗಾತ್ರ

ಹಾವೇರಿ: ‘ರಾಜಕೀಯ ಪಕ್ಷಗಳಿಂದ ಆಯ್ಕೆಯಾಗುವುದರಿಂದ ನಮ್ಮ ಬೇಡಿಕೆಗಳು ಈಡೇರುವುದಿಲ್ಲ. ಹೀಗಾಗಿ ಪಕ್ಷಾತೀತವಾಗಿ ನಾವು ಬೆಂಬಲ ನೀಡುತ್ತೇವೆ. ನೀವು ಚುನಾವಣೆಗೆ ಸ್ಪರ್ಧಿ‌ಸಿ ಎಂದುಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರು ಒತ್ತಡ ಹಾಕಿದ ಮೇರೆಗೆಹಾವೇರಿ, ಧಾರವಾಡ, ಗದಗ ಜಿಲ್ಲೆಗಳ ವ್ಯಾಪ್ತಿಯ ಸ್ಥಳೀಯ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನಪರಿಷತ್ ಸ್ಥಾನಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದೇನೆ’ ಎಂದು ಹಾವೇರಿ ಎಪಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನ ಹಾವೇರಿ ತಿಳಿಸಿದರು.

ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ನ.23ರಂದು ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರು, ಬೆಂಬಲಿಗರು, ಅಭಿಮಾನಿಗಳು, ಹಿರಿಯರೊಂದಿಗೆ ಸೇರಿ ನಾಮಪತ್ರ ಸಲ್ಲಿಸಲು ನಿರ್ಧರಿಸಿದ್ದೇನೆ ಎಂದರು.

ಸ್ಥಳೀಯ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನಪರಿಷತ್ ಸದಸ್ಯ ಸ್ಥಾನವು ರಾಜ್ಯದ ಎಲ್ಲ ವರ್ಗದ ಜನರ ಸಮಸ್ಯೆಗಳನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಅರಿತುಕೊಂಡು ವಿಧಾನಪರಿಷತ್‍ನಲ್ಲಿ ಅದನ್ನು ಪ್ರಸ್ತಾಪಿಸಿ, ಸರ್ಕಾರದ ಗಮನ ಸೆಳೆಯಲು ಬಹು ಅಗತ್ಯವಾಗಿದೆ. ಇದೇ ಉದ್ದೇಶದಿಂದ ವಿಧಾನಪರಿಷತ್ ಸ್ಥಾನವು ರಚಿತಗೊಂಡಿದೆ. ಅದರ ಉದ್ದೇಶವನ್ನು ಈಡೇರಿಸುವ ಭರವಸೆಯನ್ನು ಸದಸ್ಯರಿಗೆ ನೀಡುತ್ತೇನೆ ಎಂದರು.

ಸ್ಥಳೀಯ ಸಂಸ್ಥೆಗಳಾದ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಜೊತೆಗೆ ಗ್ರಾಮೀಣ ಜನರ ಪಾಲಿನ ‘ಹಳ್ಳಿ ವಿಧಾನಸಭೆ’ ಎಂದೇ ಗುರುತಿಸಿಕೊಂಡಿರುವ ಗ್ರಾಮ ಪಂಚಾಯಿತಿಗಳ ಚುನಾಯಿತ ಪ್ರತಿನಿಧಿಗಳ ಸಮಸ್ಯೆಯು ಸಾಕಷ್ಟಿವೆ. ಅವುಗಳನ್ನೆಲ್ಲಾ ನಿವಾರಿಸುವುದಕ್ಕೆ ಇಚ್ಛಾಶಕ್ತಿ ಬೇಕು.ನಾನು ಈಗಾಗಲೇ ಹಾವೇರಿ ಎಪಿಎಂಸಿಗೆ 2 ಬಾರಿ ಅಧ್ಯಕ್ಷನಾಗಿ ಆಯ್ಕೆಯಾಗಿದ್ದೇನೆ. ಸಂಸ್ಥೆಗಳ ಚುನಾಯಿತ ಸದಸ್ಯರು ತಮ್ಮ ಅಮೂಲ್ಯವಾದ ಪ್ರಥಮ ಪ್ರಾಶಸ್ತ್ಯದ ಮತವನ್ನು ನೀಡುವ ಮೂಲಕ ಆರ್ಶೀರ್ವದಿಸುವಂತೆ ಕೋರಿದರು.

ಗ್ರಾ.ಪಂ. ಅಧ್ಯಕ್ಷೆ ರೇಣುಕಾ ಕೆಂಚಣ್ಣನವರ, ಎಪಿಎಂಸಿ ಸದಸ್ಯ ವಿರೂಪಾಕ್ಷಪ್ಪ ಬಣಕಾರ, ರೈತ ಮುಖಂಡ ರಾಜಶೇಖರ ಬೇಟಗೇರಿ, ಮಹೇಶ ಹಾವೇರಿ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT