ಮಹಿಳೆಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನ

ಸವಣೂರ: ಮಹಿಳೆಯನ್ನು ಚಾಕುವಿನಿಂದ ತಿವಿದು ಕೊಲೆಗೆ ಯತ್ನಿಸಿದ ಘಟನೆ ಸವಣೂರ ಪಟ್ಟಣದ ಖಾದರಬಾಗ ಬಡಾವಣೆಯಲ್ಲಿ ಗುರುವಾರ ಮಧ್ಯಾಹ್ನ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಗಾಯಾಳುವನ್ನು ಹರಿಹರ ಪಟ್ಟಣದ ನಿವಾಸಿ ಬಿ.ಬಿ. ಆಯಿಶಾ ಎಂದು ಗುರುತಿಸಲಾಗಿದೆ. ಆಯಿಶಾ ಅವರಿಗೆ ವಿವಾಹವಾಗಿದ್ದು, ಅವರ ಪತಿ ಮಾನಸಿಕ ಅಸ್ವಸ್ಥ ಎನ್ನಲಾಗಿದೆ.
‘ಖಾದರಬಾಗ ಬಡಾವಣೆ ನಿವಾಸಿ ದಾವಲ್ ಮಲ್ಲಿಕ್ ಎಂಬಾತ ಎಂಟು ವರ್ಷಗಳ ಹಿಂದೆ ಆಯಿಶಾ ಅವರನ್ನು ಪರಿಚಯ ಮಾಡಿಕೊಂಡು, ಮದುವೆಯಾಗುವುದಾಗಿ ನಂಬಿಸಿದ್ದಾನೆ. ನಂತರ ಮದುವೆ ಮಾಡಿಕೊಳ್ಳಬೇಕಾದರೆ ₹ 1 ಲಕ್ಷ ನೀಡಬೇಕು ಎಂದು ಬೇಡಿಕೆಯಿಟ್ಟಿದ್ದಾನೆ. ನಂತರ ಮಹಿಳೆಯಿಂದ ₹ 50 ಸಾವಿರ ಪಡೆದ ದಾವಲ್ ಮಲ್ಲಿಕ್ ತನ್ನ ಮನೆಗೆ ಕರೆದೊಯ್ದಿದ್ದಾನೆ. ಆತನ ಕುಟುಂಬಸ್ಥರು ಆಯಿಶಾ ಅವರನ್ನು ಮನೆಯೊಳಗೆ ಕರೆದುಕೊಳ್ಳದೆ, ನ್ಯಾಯ ಮಾಡಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಅಹಮದ್ ಬೀ ಎಂಬಾತ ಆಯಿಶಾ ಅವರ ಕುತ್ತಿಗೆಗೆ ಚಾಕುವಿನಿಂದ ತಿವಿದು ಕೊಲೆಗೆ ಯತ್ನಿಸಿದ್ದಾನೆ’ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಸವಣೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿ ದಾವಲ್ ಮಲ್ಲಿಕ್ನನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.