ಹಾವೇರಿ: ‘ಅಶಕ್ತ ರಾಷ್ಟ್ರವಾಗಿದ್ದ ಭಾರತ ಜಗತ್ತಿನ ಶಕ್ತಿಯುತರಾಷ್ಟ್ರವಾಗಿ ಹೊರಹೊಮ್ಮಿದೆ. ಭವಿಷ್ಯದಲ್ಲಿ ಮತ್ತಷ್ಟು ಶಕ್ತಿಯುತವಾಗಿ ಹೊರಹೊಮ್ಮಲು ಯುವ ಸಮೂಹ ರಾಷ್ಟ್ರಪ್ರೇಮದೊಂದಿಗೆ ಪಣತೊಡಬೇಕಾಗಿದೆ’ ಎಂದು ಶಾಸಕ ನೆಹರು ಓಲೇಕಾರ ಹೇಳಿದರು.

ನಗರದ ಜಿ.ಎಚ್.ಕಾಲೇಜ್ ಆವರಣದಿಂದ ಭಾನುವಾರ ಆಯೋಜಿಸಿದ್ದ ‘ಮನೆ–ಮನೆಗೆ ರಾಷ್ಟ್ರಧ್ವಜ’ ರ್ಯಾಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಅವರು ಮಾತನಾಡಿದರು.

ಇಂದಿನ ಯುವ ಜನತೆ ದೇಶದ ಜೀವಾಳ. ಯುವ ಸಮೂಹದ ಮೇಲೆ ಜವಾಬ್ದಾರಿ ಹೆಚ್ಚಾಗಿದೆ. ಸದೃಢ ಭಾರತ ನಿರ್ಮಾಣಕ್ಕೆ ಯುವ ಜನಾಂಗ ಕಂಕಣಬದ್ಧರಾಗಬೇಕು ಎಂದು ಕರೆ ನೀಡಿದರು.

ನಗರದ ಜಿ.ಎಚ್. ಕಾಲೇಜಿನಿಂದ ಆರಂಭಗೊಂಡ ಕಾಲೇಜು ವಿದ್ಯಾರ್ಥಿಗಳ ಪ್ರಭಾತ್ ಪೇರಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ, ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಚಾಲನೆ ನೀಡಿದರು.

ಇಜಾರಿಲಕಮಾಪೂರ, ಜಿಲ್ಲಾಧಿಕಾರಿಗಳ ಕಚೇರಿ ರಸ್ತೆ, ಜಿ.ಎಚ್. ಪಟೇಲ್ ವೃತ್ತ, ಗಾಂಧಿ ವೃತ್ತ, ಮೈಲಾರ ಮಹದೇವ ವೃತ್ತದ ಮಾರ್ಗವಾಗಿ ಹೊಸಮನಿ ಸಿದ್ಧಪ್ಪ ವೃತ್ತದಲ್ಲಿ ಸಮಾವೇಶಗೊಂಡ ಬೃಹತ್ ರ್ಯಾಲಿಯಲ್ಲಿ ಪದವಿ ಪೂರ್ವ ಕಾಲೇಜುಗಳ ಮೂರು ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ತ್ರಿವರ್ಣಧ್ವಜ ಹಿಡಿದು ದೇಶಭಕ್ತಿಗೀತೆ, ಜಯಘೋಷಗಳೊಂದಿಗೆ ಎಲ್ಲರ ಗಮನ ಸೆಳೆದರು.

ಉಪವಿಭಾಗಾಧಿಕಾರಿ ಶಿವಾನಂದ ಉಳ್ಳಾಗಡ್ಡಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಚ್.ಉಮೇಶಪ್ಪ, ಜಿಲ್ಲಾ ವಾರ್ತಾಧಿಕಾರಿ ಡಾ.ಬಿ.ಆರ್.ರಂಗನಾಥ್, ನೌಕರರ ಸಂಘದ ಅಧ್ಯಕ್ಷ ಎ.ಬಿ.ಪಾಟೀಲ, ನಗರದ ವಿವಿಧ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರು, ವಿವಿಧ ಇಲಾಖೆ ಅಧಿಕಾರಿಗಳು, ನಗರದ ಶಾಲಾ-ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.