ವ್ಯಕ್ತಿತ್ವ, ಅಸ್ತಿತ್ವಕ್ಕೆ ಧಕ್ಕೆ: ಕಾನೂನು ರಕ್ಷಣೆಗೆ ರೇಣುಕಾದೇವಿ ಸಲಹೆ

7
ಅಂತರರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ

ವ್ಯಕ್ತಿತ್ವ, ಅಸ್ತಿತ್ವಕ್ಕೆ ಧಕ್ಕೆ: ಕಾನೂನು ರಕ್ಷಣೆಗೆ ರೇಣುಕಾದೇವಿ ಸಲಹೆ

Published:
Updated:
Deccan Herald

ಹಾವೇರಿ: ಮಹಿಳೆಯರ ವ್ಯಕ್ತಿತ್ವ ಹಾಗೂ ಅಸ್ತಿತ್ವಕ್ಕೆ ಧಕ್ಕೆ ಬಂದಾಗ, ಕಾನೂನಿನ ರಕ್ಷಣೆ ಪಡೆಯಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಎಸ್.ಎಚ್. ರೇಣುಕಾದೇವಿ ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಜಿಲ್ಲಾ ಪಂಚಾಯ್ತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾ ವಕೀಲರ ಸಂಘದ ಸಹಯೋಗದಲ್ಲಿ ಗುರುವಾರ ನಗರದ ಎಸ್.ಜೆ.ಎಂ.ಪದವಿ ಪೂರ್ವ ಕಾಲೇಜಿನಲ್ಲಿ ‘ಅಂತರರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ’ ಅಂಗವಾಗಿ ಹಮ್ಮಿಕೊಂಡ ಕಾನೂನು ಸಾಕ್ಷರತಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಹಿಳೆ ಇಂದು ನಾಲ್ಕು ಗೋಡೆಗಳ ನಡುವಿಗೆ ಸೀಮಿತವಾಗಿಲ್ಲ. ಸುಶಿಕ್ಷಿತಳಾಗುತ್ತಿದ್ದು, ಎಲ್ಲ ಕ್ಷೇತ್ರಗಳಲ್ಲಿ ಪುರುಷರಿಗೆ ಸಮಾನವಾಗಿ ಜೀವನ ನಡೆಸುತ್ತಿದ್ದಾಳೆ. ನೀವೂ ಉತ್ತಮ ಶಿಕ್ಷಣದ ಮೂಲಕ ಉನ್ನತ ಉದ್ಯೋಗ ಪಡೆದು, ಒಳ್ಳೆಯ ಹೆಸರು ತನ್ನಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ವೈ.ಎಲ್.ಲಾಡಖಾನ್ ಮಾತನಾಡಿ, ಈ ದೇಶದ ಕಾನೂನನ್ನು ಪ್ರತಿಯೊಬ್ಬ ವ್ಯಕ್ತಿಯೂ ಪಾಲಿಸಬೇಕು. ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗಿರುವ ಕಾನೂನಿನ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಹೆಚ್ಚಾಗಬೇಕು ಎಂದು ಆಶಿಸಿದರು.

ಜಿಲ್ಲಾ ಪಂಚಾಯ್ತಿ ಉಪಕಾರ್ಯದರ್ಶಿ ಜಿ.ಗೋವಿಂದಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ವಕೀಲೆ ರಾಜೇಶ್ವರಿ ಚಕ್ಕಳ್ಳೇರ, ಸರ್ಕಾರೇತರ ಸಂಸ್ಥೆಯ ಮುತ್ತುರಾಜ ಮಾದರ, ಪೊಲೀಸ್‌ ಸಬ್‌ಇನ್‌ಸ್ಪೆಕ್ಟರ್ ಎಸ್.ಡಿ.ಸಾಗರ, ವಕೀಲರ ಸಂಘದ ಅಧ್ಯಕ್ಷ ಅಶೋಕ ಸಿ.ನೀರಲಗಿ, ಕಾರ್ಯದರ್ಶಿ ದೇವರಾಜ ಎನ್.ನಾಯ್ಡು ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !