ಶುಕ್ರವಾರ, ಫೆಬ್ರವರಿ 3, 2023
18 °C

‘ಯುವ ಸಮೂಹ ಉದ್ಯಮಶೀಲತೆ ಬೆಳೆಸಿಕೊಳ್ಳಲಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ಯುವ ಸಮೂಹ ತಮ್ಮ ಜೀವನದಲ್ಲಿ ಉದ್ಯಮಶೀಲತೆ ಗುಣಲಕ್ಷಣಗಳನ್ನು ಬೆಳೆಸಿಕೊಳ್ಳಬೇಕು. ಸ್ವ ಉದ್ಯೋಗಕ್ಕೆ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರ ಉಪ ನಿರ್ದೇಶಕ ವಿನಾಯಕ ಜೋಶಿ ಹೇಳಿದರು.

ಹಾನಗಲ್‍ನ ರೋಶನಿ ಟ್ರಸ್ಟ್ ಸೆಮಿನಾರ್ ಹಾಲ್‍ನಲ್ಲಿ ಬುಧವಾರ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಧಾರವಾಡ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಸಹಯೋಗದಲ್ಲಿ ಜರುಗಿದ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ‘ಹತ್ತು ದಿನಗಳ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮ’ದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಜಿಲ್ಲಾ ಕೈಗಾರಿಕಾ ಕೇಂದ್ರದಲ್ಲಿ ದೊರೆಯುವ ಯೋಜನೆಗಳು ಹಾಗೂ ಬ್ಯಾಂಕಿನಿಂದ ಸಾಲ ಸೌಲಭ್ಯ ಪಡೆಯುವಲ್ಲಿ ಎದುರಿಸಬೇಕಾದ ವಿವಿಧ ಹಂತಗಳ ಬಗ್ಗೆ ಮಾಹಿತಿ ನೀಡಿದರು.

ಸಿಡಾಕ್ ಸಂಸ್ಥೆಯ ಜಂಟಿ ನಿರ್ದೇಶಕರಾದ ಶ್ರೀ ಆರ್ ಪಿ ಪಾಟೀಲ್, ರೋಶನಿ ಟ್ರಸ್ಟ್ ನಿರ್ದೇಶಕರಾದ ಶ್ರೀಮತಿ ಅನಿತಾ ಹಾಗೂ ಉದ್ಯಮಿ ಶ್ರೀಮತಿ ಗಂಗಮಾಲವ್ವ ಕರಿಗಾರ ಅವರು ಮಾತನಾಡಿದರು. ತರಬೇತುದಾರರಾದ ಶಿವಾನಂದ ತಳವಾರ ಹಾಗೂ ಬಸವರಾಜ್ ಇದ್ದರು.

ಶಿಬಿರಾರ್ಥಿಗಳಾದ ಸುಮಲತಾ ಗಿರಿಸೀನಕೊಪ್ಪ ಪ್ರಾರ್ಥನೆ ಗೀತೆ ಹಾಡಿದರು. ಸುಮಾ ಸ್ವಾಗತಿಸಿದರು. ಗೋಮವ್ವ ಲಮಾಣಿ ವಂದಿಸಿದರು. ಗಂಗಾ ಕಾರ್ಯಕ್ರಮ ನಿರೂಪಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು