ಮಂಗಳವಾರ, ಅಕ್ಟೋಬರ್ 27, 2020
22 °C

ಜಿ.ಪಂ.ಅಧ್ಯಕ್ಷ ಸ್ಥಾನದ ಚುನಾವಣೆ ಅ.22ರಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ಜಿಲ್ಲಾ ಪಂಚಾಯಿತಿ ನೂತನ ಅಧ್ಯಕ್ಷರ ಆಯ್ಕೆಗಾಗಿ ಅ.22ರಂದು ಜಿಲ್ಲಾ ಪಂಚಾಯಿತಿ ಕಾರ್ಯಾಲಯದ ಸಭಾಭವನದಲ್ಲಿ ಚುನಾವಣೆ ಜರುಗಲಿದೆ ಎಂದು ಬೆಳಗಾವಿ ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್ ಆದೇಶ ಹೊರಡಿಸಿದ್ದಾರೆ.

ಹಾವೇರಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರ ಸ್ಥಾನವನ್ನು ಸಾಮಾನ್ಯ ವರ್ಗಕ್ಕೆ ಮೀಸಲಿಡಲಾಗಿದೆ. ಜಿ.ಪಂ. ಅಧ್ಯಕ್ಷರಾಗಿದ್ದ ಬಸವನಗೌಡ ದೇಸಾಯಿ ಅವರ ನಿಧನದಿಂದ ಖಾಲಿ ಉಳಿದ ಜಿ.ಪಂ. ಅಧ್ಯಕ್ಷರ ಹುದ್ದೆಯ ಉಳಿದ ಅವಧಿಗೆ ಚುನಾವಣೆ ನಡೆಯಲಿದೆ.

ಚುನಾವಣೆ ಸಭೆಗೆ ಗೊತ್ತುಪಡಿಸಿದ ಅವಧಿಯ ಎರಡು ಗಂಟೆಗಳಿಗಿಂತ ಕಡಿಮೆ ಇಲ್ಲದಂತೆ (ಅ.22ರ ಮದ್ಯಾಹ್ನ 1 ಗಂಟೆವರೆಗೆ) ಮುಂಚಿತವಾಗಿ ಯಾರೇ ಸದಸ್ಯರು, ನಮೂನೆ-1ರಲ್ಲಿ ನಾಮ ನಿರ್ದೇಶನ ಪತ್ರವನ್ನು ಬೆಳಗಾವಿ ಪ್ರಾದೇಶಿಕ ಆಯುಕ್ತರು ಅಥವಾ ಅವರಿಂದ ಅಧಿಕೃತಗೊಳಿಸಲಾದ ಅಧಿಕಾರಿಯಾದ ಹೆಚ್ಚುವರಿ ಜಿಲ್ಲಾಧಿಕಾರಿಗೆ ಸಲ್ಲಿಸಬಹುದು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು