ಬುಧವಾರ, ಏಪ್ರಿಲ್ 1, 2020
19 °C
ಒಂದೇ ನಾಮಪತ್ರ ಸಲ್ಲಿಕೆ ಕಾರಣ ಅವಿರೋಧ ಆಯ್ಕೆ: ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ– ದೇಸಾಯಿ

ಜಿ.ಪಂ.ಅಧ್ಯಕ್ಷರಾಗಿ ಬಸನಗೌಡ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ಜಿಲ್ಲಾ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಶಿಗ್ಗಾವಿ ತಾಲ್ಲೂಕು ದುಂಢಸಿ ಕ್ಷೇತ್ರದ ಬಸನಗೌಡ ಹನುಮಂತಗೌಡ ದೇಸಾಯಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಶನಿವಾರ ಜಿ.ಪಂ.ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಗೆ ಮಧ್ಯಾಹ್ನ 1 ಗಂಟೆವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಈ ಅವಧಿಯಲ್ಲಿ ಬಸನಗೌಡ ಹನುಮಂತಗೌಡ ದೇಸಾಯಿ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಹೀಗಾಗಿ ಜಿ.ಪಂ.ಅಧ್ಯಕ್ಷ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು. 

ಬೆಳಗಾವಿ ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್ ಅವರು ಜಿ.ಪಂ.ಅಧ್ಯಕ್ಷರ ಆಯ್ಕೆಯನ್ನು ಘೋಷಿಸಿದರು.

ಜಿಲ್ಲೆಯ ಅಭಿವೃದ್ಧಿಗೆ ಶ್ರಮ

ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಪಕ್ಷಭೇದ ಮರೆತು ಎಲ್ಲ ಸದಸ್ಯರು ಒಟ್ಟಾಗಿ ಶ್ರಮಿಸುವೆವು. ಜಿಲ್ಲೆಯಲ್ಲಿ ಸಚಿವರೊಂದಿಗೆ ಹೆಚ್ಚಿನ ಅನುದಾನ ತರಲು ಎಲ್ಲರೂ ಒಗ್ಗೂಡಿ ಕೆಲಸ ಮಾಡುವುದಾಗಿ ಜಿಲ್ಲಾ ಪಂಚಾಯಿತಿ ನೂತನ ಅಧ್ಯಕ್ಷರಾದ ಬಸನಗೌಡ ದೇಸಾಯಿ ಅವರು ಹೇಳಿದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ರೈತರ ಸಮಸ್ಯೆಗಳು, ನೆರೆ ಪರಿಹಾರ ವಿತರಣೆ, ಕುಡಿಯುವ ನೀರು ಪೂರೈಕೆ, ರಸ್ತೆ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಅಗತ್ಯವಿದೆ. ಈ ನಿಟ್ಟಿನಲ್ಲಿ ಆದ್ಯತೆ ಮೇರೆಗೆ ಎಲ್ಲರ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುವೆ ಎಂದು ಹೇಳಿದರು.

ಅಧ್ಯಕ್ಷರಾಗಿ ಆಯ್ಕೆಯಾಗುವುದಕ್ಕೆ ಸಹಕರಿಸಿದ ಎಲ್ಲ ಸದಸ್ಯರಿಗೂ ಅಭಿನಂದನೆ ಸಲ್ಲಿಸಿದ ಅವರು ಉತ್ತಮ ಆಡಳಿತ ನೀಡಲು ಎಲ್ಲರೂ ಸಹಕರಿಸುವಂತೆ ಕೋರಿದರು. ನಿರ್ಗಮಿತ ಅಧ್ಯಕ್ಷರಾದ ಎಸ್.ಕೆ.ಕರಿಯಣ್ಣನವರ, ಜಿ.ಪಂ.ಮಾಜಿ ಅಧ್ಯಕ್ಷ ಕೊಟ್ರೇಶಪ್ಪ ಬಸೇಗಣ್ಣಿ ಸೇರಿದಂತೆ ಎಲ್ಲ 34 ಜಿ.ಪಂ.ಸದಸ್ಯರು ಉಪಸ್ಥಿತರಿದ್ದರು.

ಜಿಲ್ಲಾ ಪಂಚಾಯಿತಿ ಸದಸ್ಯರು, ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ.ದೇವರಾಜು, ಜಿ.ಪಂ.ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಮೇಶ ದೇಸಾಯಿ, ಹೆಚ್ಚುವರಿ ಜಿಲ್ಲಾಧಿಕಾರಿ ಯೋಗೇಶ್ವರ, ಉಪವಿಭಾಗಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು