ಬ್ಯಾಡಗಿ: ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ತೀವ್ರ ನಿಗಾ ವಹಿಸಲು ಶಾಸಕ ಸುರೇಶಗೌಡ ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು. ಸೋಮವಾರ ಇಲ್ಲಿಯ ತಾಲ್ಲೂಕು ಪಂಚಾಯಿತಿ ಪ್ರಥಮ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತಾಲ್ಲೂಕಿನ ಬುಡಪನಹಳ್ಳಿ, ಅಂಗರಗಟ್ಟಿ, ಗುಂಗರಕೊಪ್ಪ, ಕಳಗೊಂಡ ಹಾಗೂ ಲಕಮಾಜಿಕೊಪ್ಪ ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆಯುಂಟಾಗಿದ್ದು ಅದನ್ನು ನೀಗಿಸಲು ಕೂಡಲೆ ಕ್ರಿಯಾಯೋಜನೆ ತಯ್ಯಾರಿಸಿ ಕೊಳವೆ ಬಾವಿಗಳನ್ನು ಕೊರೆಸುವಂತೆ ಸಲಹೆ ನೀಡಿದರು.

ಪಂಚಾಯತ್ ರಾಜ್ ಎಂಜನಿಯರಿಂಗ್ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಜಿ.ಎಂ.ಜಗದೀಶ, ಬೇಸಿಗೆಯಲ್ಲಿ ಉಂಟಾಗಬಹುದಾಂತಹ ಸಮಸ್ಯೆಯನ್ನು ಪರಿಹರಿಸಲು ಟಾಸ್ಕಫೋರ್ಸ್ ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾಗಿದೆ. ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಸಮರ್ಥವಾಗಿ ನಿಭಾಯಿಸಲಾಗುವುದು ಎಂದು ಭರವಸೆ ನೀಡಿದರು.

13ನೇ ಹಣಕಾಸು ಯೋಜನೆಯಡಿ 28 ಲಕ್ಷ ರೂಪಾಯಿ ಕ್ರಿಯಾಯೋಜನೆ ತಯಾರಿಸಲು ಸಭೆಯು ನಿರ್ಧರಿಸಿತು. ಸಭೆಯಲ್ಲಿ ಜಿ.ಪಂ ಸದಸ್ಯರಾದ ಶಂಕ್ರಣ್ಣ ಮಾತನವರ, ವಿರೂಪಾಕ್ಷಪ್ಪ ಬಳ್ಳಾರಿ, ತಾ.ಪಂ ಅಧ್ಯಕ್ಷ ಸಿ ಸಿ.ಎಂ.ದೇಸಾಯಿ, ಉಪಾಧ್ಯಕ್ಷ ಮಲ್ಲಿಕಾರ್ಜುನ ಕರಿಲಿಂಗಣ್ಣನವರ, ಸದಸ್ಯರಾದ ಚಂದ್ರಣ್ಣ ಮುಚ್ಚಟ್ಟಿ, ನಾಗರಾಜ ಬಳ್ಳಾರಿ ಹಾಗೂ ಇನ್ನಿತರರು ಪಾಲ್ಗೊಂಡಿದ್ದರು.ಕಾರ್ಯನಿರ್ವಾಹಕ ಅಧಿಕಾರಿ ಎಸ್.ಆರ್.ಪಾಟೀಲ ಸ್ವಾಗತಿಸಿದರು. ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯರನ್ನು ಈ ಸಂದರ್ಭದಲ್ಲಿ ಸನ್ಮಾನಿಸಿ ಆತ್ಮೀಯವಾಗಿ ಬೀಳ್ಕೊಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.