ಹಾವೇರಿ: ಜಿಲ್ಲಾ ಕೇಂದ್ರವಾದ ಹಾವೇರಿ ನಗರ ಸಮಸ್ಯಗಳ ಆಗರವಾಗಿದ್ದು, ರಸ್ತೆ, ನೀರು, ಸ್ವಚ್ಛತೆ ಸೇರಿದಂತೆ ಮೂಲ ಸೌಲಭ್ಯ ಕಲ್ಪಿಸುವಲ್ಲಿ ನಗರಸಭೆ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರ ವಿಫಲವಾಗಿವೆ ಎಂದು ಆರೋಪಿಸಿ ಬಹುಜನ ಸಮಾಜ ಪಕ್ಷದ ಜಿಲ್ಲಾ ಘಟಕದ ಕಾರ್ಯಕರ್ತರು ಬುಧವಾರ ನಗರಸಭೆ ಎದುರಿಗೆ ಪ್ರತಿಭಟನೆ ನಡೆಸಿದರು.

ನಗರದ ಅಭಿವೃದ್ಧಿಯನ್ನು ಸಂಪೂರ್ಣ ಮರೆತಿರುವ ನಗರಸಭೆ ಅಧಿಕಾರಿಗಳು ಹಾಗೂ ಆಡಳಿತ ಮಂಡಳಿ ಸದಸ್ಯರು ಕೇವಲ ವೈಯಕ್ತಿಕ ಅಭಿವೃದ್ಧಿಗಾಗಿ ನಗರಸಭೆಯನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಮುಂಬರುವ ದಿನಗಳಲ್ಲಿ ಇಂತಹ ಜನಪ್ರತಿನಿಧಿಗಳು ನಮಗೆ ಬೇಡವೆಂದು ಅವರ ವಿರುದ್ಧ ಘೋಷಣೆಗಳನ್ನು ಕೂಗಿದರು.

ಮೆರವಣಿಗೆ ಮೂಲಕ ನಗರಸಭೆಗೆ ಆಗಮಿಸಿದ ಬಿಎಸ್ಪಿ ಕಾರ್ಯಕರ್ತರು ಕಚೇರಿಗೆ ನುಗ್ಗಲು ಯತ್ನಿಸಿದರು. ಆದರೆ, ಪೊಲೀಸರು ಕಾರ್ಯಕರ್ತರನ್ನು ಒಳಗೆ ಹೋಗದಂತೆ ತಡೆದಿದ್ದರಿಂದ ಕಚೇರಿ ಎದುರಿನಲ್ಲಿಯೇ ನಿಂತು ನಗರಸಭೆ ಕಾರ್ಯವೈಖರಿಯನ್ನು ಖಂಡಿಸಿದರು.

ಬಿಎಸ್ಪಿ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ ಮರೆಣ್ಣನವರ ಮಾತನಾಡಿ, ನಗರದಲ್ಲಿ ಚರಂಡಿ, ರಸ್ತೆ, ನೀರು ಸರಬರಾಜು, ಶೌಚಾಲಯ, ಉದ್ಯಾನವನ, ರಸ್ತೆ ಅಗಲೀಕರಣ ಕಾಮಗಾರಿಗಳಿಗಾಗಿ ಸರ್ಕಾರದಿಂದ ಕೋಟ್ಯಂತರ ರೂ. ಅನುದಾನ ನೀಡಿದೆ. ಆದರೆ, ಕಾಮಗಾರಿ ಮಾತ್ರ ಆಮೆಗತಿಯಲ್ಲಿ ನಡೆಯುತ್ತಿವೆ.

ಎರಡ್ಮೂರು ವರ್ಷಗಳಾದರೂ ಯಾವುದೇ ಕಾಮಗಾರಿಗಳು ಇನ್ನೂ ಪೂರ್ಣಗೊಂಡಿಲ್ಲ. ಇದರಿಂದ ನಗರದ ಪ್ರತಿಯೊಂದು ರಸ್ತೆಗಳು ಸಂಪೂರ್ಣ ಹಾಳಾಗಿವೆಯಲ್ಲದೇ, ಧೂಳು ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದ ಎಂದು ಹೇಳಿದರು.

ಚರಂಡಿಗಳು ತುಂಬಿ ರಸ್ತೆ ಮೇಲೆ ಕೊಳಚೆ ಹರಿಯುತ್ತಿದೆ. ಜನರು ಸುಲಭವಾಗಿ ಓಡಾಡುವುದು ಕಷ್ಟವಾಗಿದೆ. ಅಧಿಕಾರಿಗಳು, ಜನಪ್ರತಿನಿಧಿಗಳು ಈ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳದೇ ಕಣ್ಣಿದ್ದು ಕುರುಡರಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು.

ನಗರದ ಸಮಸ್ಯೆಗಳನ್ನು ಬಗೆಹರಿಸುವಂತೆ ನಗರಸಭೆ ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಇತ್ತೀಚೆಗೆ ನಗರಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿಗಳಿಗೂ ಮನವಿ ಸಲ್ಲಿಸಿದರೂ, ನಗರಸಭೆ ಅಧಿಕಾರಿಗಳು ಮಾತ್ರ ಕ್ಯಾರೆ ಎನ್ನುತ್ತಿಲ್ಲ ಎಂದು ಆಪಾದಿಸಿದರು.

ತಕ್ಷಣವೇ ನಗರದ ಲ್ಲಿ ನಡೆಸಿದ ಒಳಚರಂಡಿ ಕಾಮಗಾರಿ ಪೂರ್ಣಗೊಳಿಸಬೇಕು. ರಸ್ತೆಗಳ ಡಾಂಬರೀಕರಣ ಮಾಡಬೇಕು. ಸಾರ್ವಜನಿಕ ಮೂತ್ರಾಲಯ ನಿರ್ಮಾಣ, ಉದ್ಯಾನವನ ಅಭಿವೃದ್ಧಿಗೊಳಿಸಬೇಕು. ಅಕ್ಕಮಹಾದೇವಿ ಹೊಂಡವನ್ನು ಅಭಿವೃದ್ಧಿ ಪಡಿಸಿ ಪ್ರೇಕ್ಷಣೀಯ ಸ್ಥಳವನ್ನಾಗಿ ಮಾಡಬೇಕು.

ಸಮರ್ಪಕ ಕುಡಿಯುವ ನೀರು ಕಲ್ಪಿಸಬೇಕು. ರಸ್ತೆ ಅಗಲೀಕರಣ ಕಾಮಗಾರಿ ಪೂರ್ಣಗೊಳಿಸಬೇಕು. ಅತಿಕ್ರಮಣ ಗೊಂಡಿರುವ ನಗರದ ವಾಹನ ನಿಲುಗಡೆ ಸ್ಥಳಗಳನ್ನು ತೆರವುಗೊಳಿಸಬೇಕು. ಆಶ್ರಯ, ಅಂಬೇಡ್ಕರ್ ಯೋಜನೆಯಲ್ಲಿ ನಗರಸಭೆಯಿಂದ ಪಡೆದ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು.

ರೈಲು ನಿಲ್ದಾಣ ಹನುಮಂತ ದೇವಸ್ಥಾನ ಬಳಿ ಹಾಗೂ ಗುತ್ತಲ ರಸ್ತೆಯ ದ್ವಾರಬಾಗಿಲ ಬಳಿ ಬಸ್ನಿಲ್ದಾಣ ನಿರ್ಮಿಸಬೇಕು ಎಂದು ಒತ್ತಾಯಿಸಿದ ಅವರು, ಈ ಎಲ್ಲ ಬೇಡಿಕೆಗಳ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದರು.

ನಗರದ ನಾಗರಿಕರ ಸಮಸ್ಯೆಗಳಿಗೆ ನಗರಸಭೆ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರ ಶೀಘ್ರ ಸ್ಪಂದಿಸಿ, ಕ್ರಮ ಕೈಗೊಳ್ಳದಿದ್ದರೆ, ಹಾವೇರಿ ನಗರ ಬಂದ್ಗೆ ಕರೆ ನೀಡಲಾಗುವುದು ಎಂದು ಎಚ್ಚರಿಸಿದರು. ಪ್ರತಿಭಟನೆಯಲ್ಲಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗರಾಜ ಮಾಳಗಿ, ಸಿದ್ದು ರೇವಣಪ್ಪ ಅರಮಗಟ್ಟಿ, ವಿಜಯಕುಮಾರ ವಿರಕ್ತಮಠ, ಪ್ರಕಾಶ ಬೂರಡಗಿ, ಎನ್.ಟಿ. ಮಂಜುನಾಥ ಮತ್ತಿತರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.