ಹಾವೇರಿ: ಗ್ರಾಮಸಭೆಯಲ್ಲಿ ಆಯ್ಕೆ ಮಾಡಿದ ವಸತಿ ಯೋಜನೆಯ ಫಲಾನುಭವಿಗಳನ್ನು ಬಿಟ್ಟು ಬೇರೆ ಫಲಾನುಭವಿಗಳನ್ನು ಆಯ್ಕೆ ಮಾಡಿರುವ ತಾಲ್ಲೂಕು ಪಂಚಾಯಿತಿ ಕ್ರಮವನ್ನು ಖಂಡಿಸಿ ತಾಲ್ಲೂಕಿನ ಅಗಡಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಗ್ರಾಮಸ್ಥರು ಸೋಮವಾರ ತಾ.ಪಂ. ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರು ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಡಾ.ಬಸವರಾಜಪ್ಪ ಅವರ ವಿರುದ್ದ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ, ತಕ್ಷಣವೇ ಅನರ್ಹ ಫಲಾನುಭವಿಗಳ ಪಟ್ಟಿಯನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿದರು.

ಅಗಡಿ ಗ್ರಾ.ಪಂ. ಗ್ರಾಮದಲ್ಲಿ ನಡೆಸಿದ ಗ್ರಾಮಸಭೆಯಲ್ಲಿ ಬಸವ ವಸತಿ ಯೋಜನೆಯಡಿ 400 ಫಲಾನುಭವಿಗಳನ್ನು ಆಯ್ಕೆ ಮಾಡಿ ಅನುಮೋದನೆಗಾಗಿ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಕಳುಹಿಸಿತ್ತು. ಆದರೆ, ತಾ.ಪಂ.ಕಾರ್ಯ ನಿರ್ವಾಹಕ ಅಧಿಕಾರಿಗಳು ಗ್ರಾಮಸಭೆಯಲ್ಲಿ ಆಯ್ಕೆಯಾದ ಫಲಾನುಭವಿಗಳನ್ನು ತೆಗೆದು ಹಾಕಿ ತಮಗೆ ಬೇಕಾದವರನ್ನು ಆಯ್ಕೆ ಮಾಡುವ ಮೂಲಕ ಪ್ರಜಾಪ್ರಭುತ್ವ ವಿರೋಧಿ ನೀತಿ ಅನುಸರಿಸಿದ್ದಾರೆ ಎಂದು ಆರೋಪಿಸಿದರು. ಈ ಸಂದರ್ಭದಲ್ಲಿ ಅಗಡಿ ಗ್ರಾ.ಪಂ.ಸದಸ್ಯ ನಿಂಗಪ್ಪ ಶಿವಣ್ಣನವರ ಮಾತನಾಡಿ, ತಾ.ಪಂ. ಕಾರ್ಯ ನಿರ್ವಾಹಕ ಅಧಿಕಾರಿಗಳು ಬಸವ ವಸತಿ ಯೋಜನೆ ಫಲಾನುಭವಿಗಳ ಪಟ್ಟಿಯನ್ನು ಬದಲು ಮಾಡುವ ಮೂಲಕ ಗ್ರಾಮಸಭೆಯ ಅಧಿಕಾರವನ್ನು ಕಿತ್ತುಕೊಂಡಿದ್ದಾರೆ. ಹೀಗೇಕೆ ಮಾಡಿದ್ದೀರಿ ಎಂದು ಪ್ರಶ್ನಿಸಿದರೆ ಸ್ಥಳೀಯ ಶಾಸಕರನ್ನು ಕೇಳಿ ಎಂದು ಜಾರಿಕೊಳ್ಳುತ್ತಾರೆ ಎಂದು ದೂರಿದರು.

ಯಾವುದೇ ಕಾರಣಕ್ಕೂ ಗ್ರಾಮಸಭೆಯಲ್ಲಿ ಆಯ್ಕೆ ಯಾದ ಫಲಾನುಭವಿಗಳ ಪಟ್ಟಿಯನ್ನು ಬದಲು ಮಾಡಲು ಬಿಡುವುದಿಲ್ಲ. ಫಲಾನುಭವಿ ಗಳನ್ನು ಆಯ್ಕೆ ಮಾಡುವ ಹಕ್ಕು ಶಾಸಕರಿಗಿದ್ದರೆ ಅದನ್ನು ಲಿಖಿತವಾಗಿ ನೀಡಲಿ ಎಂದು ಸವಾಲು ಹಾಕಿದರು.

ತಾ.ಪಂ. ಅನುಮೋದಿಸಿರುವ ಫಲಾನುಭವಿಗಳ ಪಟ್ಟಿಯನ್ನು ರದ್ದುಪಡಿಸಿ ಗ್ರಾಮಸಭೆಯಲ್ಲಿ ಆಯ್ಕೆ ಯಾದ ಫಲಾನುಭವಿಗಳನ್ನು ಅಂತಿಮ ಗೊಳಿಸಬೇಕು. ಇಲ್ಲವಾದರೆ, ತಾ.ಪಂ.ಕಚೇರಿ ಎದುರು ಅನಿರ್ಧಿಷ್ಟಕಾಲ ಪ್ರತಿಭಟನೆ ನಡೆಸುವು ದಾಗಿ ಎಚ್ಚರಿಸಿದರು.

ಇದೇ ಸಂದರ್ಭದಲ್ಲಿ ಪ್ರತಿಭಟನಾಕಾರರ ಹಾಗೂ ಅಧಿಕಾರಿಗಳ ಮಧ್ಯ ವಾಗ್ವಾದ ನಡೆಯಿತ ್ಲಲದೇ, ಮಧ್ಯೆ ಪ್ರವೇಶಿಸಿದ ಪೊಲೀಸರು ಜತೆಯೂ ಮಾತಿನ ಚಕಮಕಿ ನಡೆಯಿತು.

ಪ್ರತಿಭಟನೆಯಲ್ಲಿ ಗ್ರಾ.ಪಂ.ಅಧ್ಯಕ್ಷೆ ಪೂರ್ಣಿಮಾ ನಿರ್ವಾಣಿಮಠ, ಉಪಾಧ್ಯಕ್ಷೆ ಫಕ್ಕೀರವ್ವ ಹರಿಜನ, ಸದಾ ಬಸೇಗಣ್ಣಿ, ಫಕ್ಕೀರವ್ವ ಕಡ್ಲಿ, ಸತೀಶ ಈಳಗೇರ, ನಾಗಮ್ಮ ಈಗಳೇರ, ಗಂಗಮ್ಮ ಬಿದರಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.