ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತಿಭೆ ಗುರುತಿಸಲು ಶಿಕ್ಷಕನ ಪಾತ್ರ ಮಹತ್ವದ್ದು

Last Updated 15 ಸೆಪ್ಟೆಂಬರ್ 2011, 5:20 IST
ಅಕ್ಷರ ಗಾತ್ರ

ಹಾವೇರಿ: `ಶಿಕ್ಷಣ ನಿಂತ ನೀರಲ್ಲ, ಸದಾ ಹರಿಯುತ್ತಿ ರುವ ನೀರು ಎಂಬುದನ್ನು ಅರಿತು ಶಿಕ್ಷಕರು ಮಕ್ಕಳಿಗೆ ಬೋಧನೆ ಮಾಡಬೇಕಲ್ಲದೇ, ಅವರಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿದಾಗ ಮಾತ್ರ ಉತ್ತಮ ಸಾಧನೆ ನಿರೀಕ್ಷಿಸಲು ಸಾಧ್ಯ~ ಎಂದು ನಿವೃತ್ತ ಮುಖ್ಯಾಧ್ಯಾಪಕ ಆರ್.ಕೆ.ಬೆಳ್ಳಿಗಟ್ಟಿ ಹೇಳಿದರು.

ನಗರದ ಹುಕ್ಕೇರಿಮಠದ ಶಿವಲಿಂಗೇಶ್ವರ ಡಿ.ಇಡಿ. ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ದ್ವಿತೀಯ ವರ್ಷದ ಡಿ.ಇಡಿ. ಪ್ರಶಿಕ್ಷಣಾರ್ಥಿಗಳ ಬೀಳ್ಕೊಡುಗೆ ಹಾಗೂ ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿಗಳ ಸ್ವಾಗತ ಸಮಾರಂಭದಲ್ಲಿ ಅವರು ಮಾತನಾಡಿದರು.

ಪ್ರಾಮಾಣಿಕ ಆದರ್ಶಗುಣಗಳನ್ನು ಬೆಳೆಸಿಕೊಂಡು ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಬೇಕು. ಆದರ್ಶ ಸಮಾಜದ ನಿರ್ಮಾಣಕ್ಕೆ ನಾಂದಿ ಹಾಡಬೇಕು ಎಂದು ಪ್ರಶಿಕ್ಷಣಾರ್ಥಿಗಳಿಗೆ ಕಿವಿಮಾತು ಹೇಳಿದರು.
ಜಿಲ್ಲಾ ಡಯಟ್ ಪ್ರಾಚಾರ್ಯ ಎಂ.ಡಿ.ಬಳ್ಳಾರಿ ಮಾತನಾಡಿ, ಪ್ರಾಥಮಿಕ ಶಾಲಾ ಶಿಕ್ಷಕ ವೃತ್ತಿ ಬಹಳ ಜವಾಬ್ದಾರಿಯುತವಾಗಿದ್ದು, ಪ್ರಶಿಕ್ಷಣಾರ್ಥಿಗಳು ವೃತ್ತಿ ಜೀವನದಲ್ಲಿ ತಮ್ಮನ್ನು ತೊಡಗಿಸಿಕೊಂಡು ಸಮಾಜ ದಲ್ಲಿ ಉತ್ತಮ ಶಿಕ್ಷರಾಗಬೇಕೆಂದು ಸಲಹೆ ಮಾಡಿದರು.

ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳಾದ ಶಿವಾನಂದ ಜಾಣನವರ, ಪ್ರೇಮಾ ಹೊಸಮನಿ, ಗಿರೀಶ ಗಡ್ಡದ, ಪಿ.ಶಿಲ್ಪಾ ತಮ್ಮ ಅನಿಸಿಕೆಗಳನ್ನು ವ್ಯಕ್ತ ಪಡಿಸಿದರು.ಈ ಸಂದರ್ಭದಲ್ಲಿ ಪ್ರಾಚಾರ್ಯ ಬಿ.ಬಸವರಾಜ ಅವರನ್ನು ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ಸನ್ಮಾನಿಸಿದರು.

ಜಿ.ವಿ.ಪಾಟಕ, ಸಿ.ಬಿ.ವೀರಪ್ಪನವರ, ಪಿ.ಬಿ.ಮುದ್ದಿ, ಡಾ.ಗದಿಗೇಪ್ಪ ಜೋಶಿ, ಎಸ್.ಎಸ್. ಹಿರೇಮಠ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.ಪೂರ್ಣಿಮಾ ಗುತ್ತಲ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ಶೃತಿ ಮಠದ ಸ್ವಾಗತಿಸಿದರು. ವಿಜಯ ಲಕ್ಷ್ಮೀ ಜಿಗಳಿ ನಿರೂಪಿಸಿ, ವಂದಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT