ರಾಣೆಬೆನ್ನೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ ತಾಲ್ಲೂಕು ಘಟಕದ ವತಿಯಿಂದ ಮಂಗಳವಾರ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ, ತಹಸೀಲ್ದಾರ ಮತ್ತು ತಾ.ಪಂ ಕಾರ್ಯ ನಿರ್ವಾಹಕ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಗ್ರಾ.ಪಂ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ರಂಗಪ್ಪ ಕೊರಕಲಿ ಮಾತನಾಡಿ, ಗ್ರಾಮ ಪಂಚಾಯಿತಿಯಲ್ಲಿ ಅರೆಕಾಲಿಕ ನೆಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬಿಲ್ ಕಲೆಕ್ಟರ್, ಗುಮಾಸ್ತರು, ವಾಟರ ಮನ್, ಸಿಪಾಯಿ, ಸ್ವೀಪರ್ಗಳು ಸೂಕ್ತ ಉದ್ಯೋಗ ಭದ್ರತೆ ಇಲ್ಲದೇ ಸೇವೆ ಸಲ್ಲಿಸುತ್ತಿದ್ದು, ಅಲ್ಪ ಸಂಬಳದಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರ ಬೇಡಿಕೆಗಳನ್ನು ಈಡೇರಿಸುವಂತೆ ಅನೇಕ ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನ ವಾಗಿಲ್ಲ ಎಂದು ದೂರಿದರು.

ಗ್ರಾ.ಪಂ ನೌಕರರಿಗೆ ವೇತನ ಪ್ರತಿ ತಿಂಗಳು ದೊರೆಯುಂತೆ ಕ್ರಮ ಕೈಗೊಳ್ಳಬೇಕು, ಸರ್ಕಾರದಿಂದ ಬಿಡುಗಡೆ ಮಾಡುವ ಶಾಸನ ಬದ್ದ ಅನುದಾನದಡಿ ಶೇ.40 ರಷ್ಟು ಅನುದಾನವನ್ನು ಸಿಬ್ಬಂದಿ ವೇತನಕ್ಕಾಗಿ ಬಿಡುಗಡೆ ಮಾಡುತ್ತಿದ್ದು, ಈ ಮೊತ್ತ ಪ್ರತ್ಯೇಕ ಬ್ಯಾಂಕ್ ಖಾತೆಯಲ್ಲಿ ಜಮೆ ಮಾಡಿ ನೌಕರರ ವೇತನಕ್ಕಾಗಿ ಪಾವತಿಸುವಂತಾಗಬೇಕು, ಭವಿಷ್ಯ ನಿಧಿ, ಜನಶ್ರೀ ವಿಮಾ ಯೋಜನೆ ಜಾರಿ ಮಾಡಲು ಸರ್ಕಾರದಿಂದ ಆದೇಶ ಮಾಡಿದರೂ ಇಲ್ಲಿಯವರೆಗೂ ಅನುಷ್ಠಾನ ಗೊಳಿಸಿಲ್ಲ, ಕೂಡಲೇ ಅನುಷ್ಠಾನಗೊಳಿಸಬೇಕು, ಪ್ರತಿ ತಿಂಗಳು ಕಾರ್ಮಿಕ ಇಲಾಖೆ ನಿಗದಿಪಡಿಸಿದ ಕನಿಷ್ಠ ವೇತನ ಹಾಗೂ ತುಟ್ಟಿಭತ್ಯೆ ಸೇರಿದಂತೆ ಪಾವತಿಸಬೇಕೆಂದು ಒತ್ತಾಯಿಸಿದರು.

ವಿಜಯ ಮಿಳ್ಳಿ, ಮಾಲತೇಶ ಮಡಿವಾಳರ, ಬಸವರಾಜ ಕೊಂಗಿ, ಶ್ರೀಧರ ಶೇಷಗಿರಿ, ಗಣೇಶ ಬಾಣಿ, ಸುರೇಶ ಹೊರಕೇರಿ, ಕೆ. ಮಂಜುನಾಥ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.