ಬ್ಯಾಡಗಿ: ಮೋಟೆಬೆನ್ನೂರ ಗ್ರಾಮದ 14 ವರ್ಷದ ಬಾಲಕಿಯೊಬ್ಬಳು ಶಂಕಿತ ಡೆಂಗೆ ಜ್ವರಕ್ಕೆ ಬಲಿಯಾಗಿದ್ದಾಳೆ. ಮೃತ ಬಾಲಕಿಯನ್ನು ಅಂಜುಮಾ ಶರೀಫಸಾಬ ಕೆರಿಮತ್ತಿಹಳ್ಳಿ (14) ಎಂದು ಗುರುತಿಸಲಾಗಿದ್ದು, ಸ್ಥಳೀಯ ಶಾಲೆಯಲ್ಲಿ 8ನೇ ತರಗತಿಗೆ ದಾಖಲಾಗಿದ್ದಳು ಎನ್ನಲಾಗಿದೆ.

ಇದೇ 15ಕ್ಕೆ ಜ್ವರ ಕಾಣಿಸಿಕೊಂಡಿದ್ದು, ತೀವ್ರಗೊಂಡಾಗ ರಾಣೆಬೆನ್ನೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಅಲ್ಲಿ ಜ್ವರ ಹತೋಟಿಗೆ ಬರದ ಕಾರಣ 17ರಂದು ದಾವಣಗೆರೆಯ ಎಸ್ಎಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದ ಹಿನ್ನೆಲೆಯಲ್ಲಿ ಗುರುವಾರ ಮಧ್ಯಾಹ್ನ ಬಾಲಕಿ ಮೃತಳಾದಳೆಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

ಆರೋಪ: ಸ್ಥಳೀಯ ಗ್ರಾಮ ಪಂಚಾಯ್ತಿ ಜನಪ್ರತಿನಿಧಿಗಳು, ಅಭಿವೃದ್ಧಿ ಅಧಿಕಾರಿ ಹಾಗೂ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳ ನಿರ್ಲಕ್ಷ್ಯದಿಂದ ಡೆಂಗೆ ಜ್ವರ ಹೆಚ್ಚಾಗಲು ಕಾರಣವಾಗಿದೆ ಎಂದು ಜಿ.ಪಂ ಸದಸ್ಯ ವಿರೂಪಾಕ್ಷಪ್ಪ ಬಳ್ಳಾರಿ ನೇರವಾಗಿ ಆರೋಪಿಸಿದ್ದಾರೆ.

ಈ ಕುರಿತು ಗುರುವಾರ `ಪ್ರಜಾವಾಣಿ'ಗೆ ಪ್ರತಿಕ್ರಿಯೆ ನೀಡಿದ ಅವರು ಗ್ರಾಮ ಪಂಚಾಯ್ತಿಗಳಿಗೆ ಸಾಕಷ್ಟು ಪ್ರಮಾಣದ ಅನುದಾನ ಲಭ್ಯವಾಗದ ಹಿನ್ನೆಲೆಯಲ್ಲಿ ಸ್ವಚ್ಛತೆಗೆ ಹೆಚ್ಚು ಗಮನ ನೀಡುತ್ತಿಲ್ಲ. ಇದರಿಂದಲೇ ಸೊಳ್ಳೆಗಳ ಸಂಖ್ಯೆ ಹೆಚ್ಚಾಗಲು ಕಾರಣವಾಗಿದೆ ಎಂದು ಆರೋಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.