ಗುತ್ತಲ: ಪಟ್ಟಣದ ನಿವಾಸಿಯಾದ ಮಲ್ಲಪ್ಪ ಕರಿಯಲ್ಲಪ್ಪ ತಂಬೂರಿ (50) ಸಂಬಂಧಿಯ ಶವಸಂಸ್ಕಾರಕ್ಕೆ ಬಂದ ಸಂದರ್ಭದಲ್ಲಿ ತಾವೇ ಶವವಾದ ಘಟನೆ ಜರುಗಿದೆ.

ಶವಸಂಸ್ಕಾರದ ಎಲ್ಲಾ ವಿಧಿ ವಿಧಾನಗಳನ್ನು ಮುಗಿಸಿ ಪಕ್ಕದ ದೊಡ್ಡಹೊಂಡದಲ್ಲಿ ಮುಖ ತೊಳೆಯಲಿಕ್ಕೆ ಹೋದಾಗ ಕಾಲು ಜಾರಿಬಿದ್ದು ಅವರು ಸಾವನ್ನಪ್ಪಿದ್ದಾರೆ.

ಘಟನೆ ಬುಧವಾರ ಸಂಜೆ ಸಂಭವಿಸಿದೆ. ಸುದ್ದಿ ತಿಳಿದ ಕೂಡಲೇ ಸ್ಥಳೀಯ ಪೋಲಿಸರು ಹಾವನೂರು ಗ್ರಾಮದಿಂದ ಮೀನುಗಾರರನ್ನು ಕರೆಯಿಸಿ ಸುಮಾರು ಎರಡು ಗಂಟೆಗಳ ಸತತ ಕಾರ್ಯಾಚರಣೆಯ ನಂತರ ಮೃತದೇಹವನ್ನು ಪತ್ತೆ ಹಚ್ಚಿದರು.

ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆರೋಗ್ಯ ಸಮುದಾಯ ಕೇಂದ್ರಕ್ಕೆ ತರಲಾಯಿತು.
ಅವರಿಗೆ ಪತ್ನಿ ಮತ್ತು ಮೂವರು ಪುತ್ರರು ಇದ್ದಾರೆ. ಸಂಬಂಧಿಕರ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿತ್ತು.
ಈ ಕುರಿತು ಗುತ್ತಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.