ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮನೆಬಾಗಿಲಿಗೆ ಹೋಗಿ ಸಮಸ್ಯೆ ಪರಿಹರಿಸಿ’

ಕಾಂಗ್ರೆಸ್ ಬೆಂಬಲಿತ ಅಧ್ಯಕ್ಷ, ಉಪಾಧ್ಯಕ್ಷ , ಸದಸ್ಯರ ಸನ್ಮಾನ
Last Updated 6 ಜುಲೈ 2015, 8:49 IST
ಅಕ್ಷರ ಗಾತ್ರ

ಹಿರೇಕೆರೂರ: ಸ್ಥಳೀಯ ಜನಪ್ರತಿ ನಿಧಿಗಳು ಗ್ರಾಮಗಳ ಶುಚಿತ್ವ ಹಾಗೂ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಶ್ರಮಿಸಬೇಕು. ಜನತೆಯ ಸಮಸ್ಯೆಗಳನ್ನು ಅವರ ಮನೆಬಾಗಿಲಿಗೆ ಹೋಗಿ ತಿಳಿದುಕೊಂಡು ಪರಿಹರಿಸಿದಾಗ ಜನರ ಮನದಾಳದಲ್ಲಿ ಉಳಿಯಲು ಸಾಧ್ಯ ಎಂದು ಮಾಜಿ ಶಾಸಕ ಬಿ.ಸಿ.ಪಾಟೀಲ ಹೇಳಿದರು.

ಪಟ್ಟಣದ ಗುರುಭವನದಲ್ಲಿ ತಾಲ್ಲೂಕು ಕಾಂಗ್ರೆಸ್ ಸಮಿತಿಯಿಂದ ಭಾನುವಾರ ನೂತನ ಗ್ರಾಮ ಪಂಚಾಯ್ತಿಗೆ ಆಯ್ಕೆಯಾದ ಕಾಂಗ್ರೆಸ್‌ ಬೆಂಬಲಿತ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ಏರ್ಪಡಿಸಿದ್ದ ಅಭಿನಂದನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.


ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಜನಪರ ಹಾಗೂ ರೈತ ಪರವಾದ ಯೋಜನೆಗಳಿಂದ ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಕಾಂಗ್ರೆಸ್‌ ಪಕ್ಷ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಕಾರಣವಾಗಿದೆ. ಗ್ರಾಮಗಳ ಅಭಿವೃದ್ಧಿ ಯಲ್ಲಿ ಗ್ರಾಮ ಪಂಚಾಯಿತಿಗಳು ಮುಖ್ಯ ಪಾತ್ರ ವಹಿಸುತ್ತವೆ.

ಅರ್ಹರಿಗೆ ಸರ್ಕಾರದ ಸೌಲಭ್ಯಗಳನ್ನು ನಿಷ್ಪಕ್ಷಪಾತವಾಗಿ ತಲುಪಿಸಬೇಕು ಎಂದರು. ಗ್ರಾಮ ಪಂಚಾಯಿತಿ ಚುನಾವಣೆ ಯಲ್ಲಿ ಪಕ್ಷ ಬೆಂಬಲಿತ ಅಭ್ಯರ್ಥಿಗಳ ಗೆಲುವು ಮುಂದಿನ ದಿನಗಳಲ್ಲಿ ಬರುವ ತಾ.ಪಂ. ಹಾಗೂ ಜಿ.ಪಂ. ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಗೆಲುವಿಗೆ ಶುಭಸೂಚನೆಯಾಗಿದೆ ಎಂದು ಬಿ.ಸಿ.ಪಾಟೀಲ ಹೇಳಿದರು.

ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ ಮಾತನಾಡಿ, ಪ್ರಜಾತಂತ್ರ ವ್ಯವಸ್ಥೆ ಯಲ್ಲಿ ಜನರ ಹತ್ತಿರ ಇರುವದು ಗ್ರಾಮ ಪಂಚಾಯಿತಿ. ಗ್ರಾಮಗಳ ಸಮಸ್ಯೆಗಳನ್ನು ಬಗೆಹರಿಸಿ ಅಭಿವೃದ್ಧಿಪಡಿಸುವ ಜವಾ ಬ್ದಾರಿ ಆಯ್ಕೆಯಾದ ಸದಸ್ಯರುಗಳು ನಿಮ್ಮ ಮೇಲಿದೆ. ಅಧಿಕಾರವನ್ನು ಸರಿಯಾಗಿ ನಿಭಾಯಿಸಿ ಎಲ್ಲ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಂಡು ಅಭಿವೃದ್ಧಿ ಮಾಡುವ ಜೊತಗೆ ಜನರ ವಿಶ್ವಾಸಕ್ಕೆ ಪಾತ್ರರಾಗಬೇಕು ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಮಾಜಿ ಶಾಸಕ ಬಿ.ಎಚ್.ಬನ್ನಿಕೋಡ, ಕಾಂಗ್ರೆಸ್ ಪಕ್ಷದ ಜನಪರ ಆಡಳಿತದಿಂದ ಹಾಗೂ ನಿಮ್ಮ ವ್ಯಕ್ತಿತ್ವ ಹಾಗೂ ಸ್ವಶಕ್ತಿಯ ಆಧಾರದ ಮೇಲೆ ನೀವು ಆಯ್ಕೆಯಾಗಿದ್ದೀರಿ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸರ್ಕಾರದ ಎಲ್ಲ ಸೌಲಭ್ಯಗಳನ್ನು ಅರ್ಹರಿಗೆ ಮುಟ್ಟಿಸಬೇಕು. ಸರ್ಕಾರಗಳಿಂದ ಗ್ರಾ.ಪಂಗಳಿಗೆ ಬರುವ ಅನುದಾನ ಹಾಗೂ ಯೋಜನೆಗಳನ್ನು ಬಳಸಿಕೊಂಡು ಗ್ರಾಮಗಳನ್ನು ಅಭಿವೃದ್ಧಿ ಮಾಡಬೇಕು ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ನಾಗರಾಜ ಛಬ್ಬಿ, ಸ್ಥಳೀಯ ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷರಾದ ಡಿ.ಸಿ.ಪಾಟೀಲ, ಎಸ್.ಕೆ. ಕರಿಯಣ್ಣನವರ, ಮಹಿಳಾ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷೆ ಮಂಜುಳಾ ರವಿಶಂಕರ ಬಾಳಿಕಾಯಿ, ಅಶೋಕ ಪಾಟೀಲ, ಪ.ಪಂ. ಅಧ್ಯಕ್ಷೆ ಶಿವಲೀಲಾ ರಂಗಕ್ಕನವರ, ಎಪಿಎಂಸಿ ಅಧ್ಯಕ್ಷ ಹನುಮಂತಗೌಡ ಭರಮಗೌಡ್ರ, ವನಜಾ ಪಾಟೀಲ, ಕುಸುಮಾ ಬಣಕಾರ, ಪರಮೇಶಪ್ಪ ಗವಿಯಪ್ಪನವರ, ಆರ್.ಎನ್.ಗಂಗೋಳ, ಪ್ರಕಾಶ ಬನ್ನಿಕೋಡ, ನಾರಾಣಪ್ಪ ಗೌರಕ್ಕನವರ, ಎಸ್.ಬಿ.ತಿಪ್ಪಣ್ಣನವರ, ಗುರುಶಾಂತಪ್ಪ ಎತ್ತಿನಹಳ್ಳಿ, ವೀರಬಸಪ್ಪ ಮತ್ತೂರ, ಗೌಸಮೋದ್ದಿನ್‌ಸಾಬ್ ತೋಟದ, ಸಣ್ಣಗೌಡ ಪಾಟೀಲ, ಸೋಮಪ್ಪ ಶಿದ್ಲಿಂಗಪ್ಪನವರ ಮತ್ತಿತರ ಪ್ರಮುಖರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT