ಬುಧವಾರ, ಮಾರ್ಚ್ 3, 2021
30 °C

ನಾನು ಹಳೆಯ ಕಾಂಗ್ರೆಸ್ಸಿಗ: ದೇವೇಗೌಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ನಾನು ಹಳೆಯ ಕಾಂಗ್ರೆಸ್ಸಿಗ. ಸೋನಿಯಾಗಾಂಧಿ ಮುಂದಾಲೋಚನೆಯಿಂದ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾರೆ ಎಂದು ಎಚ್.ಡಿ.ದೇವೇಗೌಡ ಹೇಳಿದರು.

ಇದರ ಪರಿಣಾಮ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಬಿಜೆಪಿಯ ನಾಗಾಲೋಟಕ್ಕೆ ತಡೆ ಬಿದ್ದಿದೆ. ದೇಶದಲ್ಲಿ ಕಾಂಗ್ರೆಸ್ ಬಲವರ್ಧನೆಗೊಂಡಿದೆ ಎಂದು ವಿಜಯಪುರದಲ್ಲಿ ಶುಕ್ರವಾರ ರಾತ್ರಿ ನಡೆದ ಜೆಡಿಎಸ್ ಪ್ರಚಾರ ಸಭೆಯಲ್ಲಿ ಹೇಳಿದರು.

ಅಡ್ವಾಣಿಯನ್ನು ಕೆಟ್ಟದಾಗಿ ನಡೆಸಿಕೊಂಡ ಮೋದಿ, ಚಿಕ್ಕೋಡಿಯಲ್ಲಿ ನನ್ನ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ. ಅದನ್ನು ಬೆಳೆಸಲು ಇಚ್ಚಿಸಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಅಲ್ಪಸಂಖ್ಯಾತರಿಗೆ, ಮಹಿಳೆಯರಿಗೆ ರಾಜಕೀಯ ಮೀಸಲಾತಿ ಬೇಕಿದೆ. ಈ ನಿಟ್ಟಿನಲ್ಲಿ ಯತ್ನಿಸುವೆ ಎಂದು ದೇವೇಗೌಡ ಹೇಳಿದರು.

ಮೋದಿ ಏಕಚಕ್ರಾಧಿಪತಿಯಾಗಿದ್ದಾರೆ. ಸಾಂವಿಧಾನಿಕ ಸಂಸ್ಥೆಗಳನ್ನು ಸರ್ವನಾಶ ಮಾಡಿದ್ದಾರೆ. ಯುವ ಸಮೂಹ ಮೋದಿ ಮಾತಿನ ಮೋಡಿಯಿಂದ ಹೊರಗೆ ಬರಬೇಕಿದೆ ಎಂದು ದೇವೇಗೌಡ ಮನವಿ ಮಾಡಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು