ಯಡಿಯೂರಪ್ಪ ಮಣಿಸಲು ಈಶ್ವರಪ್ಪ ತಂತ್ರ: ರೇವಣ್ಣ

ಗುರುವಾರ , ಮೇ 23, 2019
29 °C

ಫಲಿತಾಂಶ (ಮುನ್ನಡೆ+ಗೆಲುವು) 0/542LIVE

ಯಡಿಯೂರಪ್ಪ ಮಣಿಸಲು ಈಶ್ವರಪ್ಪ ತಂತ್ರ: ರೇವಣ್ಣ

Published:
Updated:

ಶಿವಮೊಗ್ಗ: ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಬಾರದು. ಅವರ ಮಗ ಸಂಸದ ಆಗಬಾರದು ಎನ್ನುವುದೇ ಕೆ.ಎಸ್‌.ಈಶ್ವರಪ್ಪ ಉದ್ದೇಶ ಎಂದು ಜೆಡಿಎಸ್ ಮುಖಂಡ ಎಚ್‌.ಡಿ.ರೇವಣ್ಣ ಹೇಳಿದರು.

‘ನಮಗಿಂತ ಹೆಚ್ಚಾಗಿ ರಾಘವೇಂದ್ರ ಅವರನ್ನು ಸೋಲಿಸಲು ಬಿಜೆಪಿ ಮುಖಂಡರೇ ತಯಾರಾಗಿದ್ದಾರೆ. ಈ ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ನೀರಾವರಿ ಸಚಿವರಾಗಿದ್ದ ಈಶ್ವರಪ್ಪ ಶಿವಮೊಗ್ಗ ಜಿಲ್ಲೆಗೆ ಹಲವು ಯೋಜನೆ ಜಾರಿಗೊಳಿಸಲು ಮುಂದಾಗಿದ್ದರು. ಆದರೆ, ಈಶ್ವರಪ್ಪಗೆ ಹೆಸರು ಬರುತ್ತದೆ ಎನ್ನುವ ಕಾರಣಕ್ಕೆ ತಡೆಯೊಡ್ಡಿದ್ದರು. ನಂತರ ಅವರನ್ನು ಮೂಲೆಗುಂಪು ಮಾಡಲು ಯಡಿಯೂರಪ್ಪ ತಂತ್ರ ರೂಪಿಸುತ್ತಲೇ ಬಂದರು. ಈ ಸೂಕ್ಷ್ಮತೆ ಅರಿತ ಈಶ್ವರಪ್ಪ ರಾಯಣ್ಣ ಬ್ರಿಗೇಡ್‌ ಕಟ್ಟಿದ್ದರು. ಕೊನೆಗೆ ಕಷ್ಟುಪಟ್ಟು ಟಿಕೆಟ್‌ ಗಿಟ್ಟಿಸಿಕೊಳ್ಳುವ ಪರಿಸ್ಥಿತಿ ಈಶ್ವರಪ್ಪಗೆ ಬಂದಿತ್ತು. ಈ ಸೇಡು ತೀರಿಸಿಕೊಳ್ಳಲು ಈಗ ಈಶ್ವರಪ್ಪ ತಂತ್ರ ರೂಪಿಸಿದ್ದಾರೆ’ ಎಂದು ಮಾಹಿತಿ ನೀಡಿದರು.

ನನ್ನ ಮತ್ತು ಈಶ್ವರಪ್ಪ ನಡುವಿನ ಸಂಬಂಧ ಚೆನ್ನಾಗಿದೆ. ಹಲವು ಬಾರಿ ತಮ್ಮ ಬಳಿ ಅವರು ಯಡಿಯೂರಪ್ಪ ನೀಡಿದ ನೋವು ಹೇಳಿಕೊಂಡಿದ್ದಾರೆ. ಸಮಯ ಬಂದಾಗ ಇದೆಲ್ಲವನ್ನೂ ಅವರೇ ಬಾಯಿಬಿಡುತ್ತಾರೆ. ಕುರುಬ ಸಮಾಜಕ್ಕೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್‌ ನೀಡಿಲ್ಲ ಎಂಬ ಸಿಟ್ಟೂ ಈಶ್ವರಪ್ಪ ಅವರಿಗಿದೆ. ಹಾಗಾಗಿ, ಈ ಚುನಾವಣೆಯಲ್ಲಿ ರಾಘವೇಮದ್ರ ಅವರನ್ನು ಸೋಲಿಸಿ ಸೇಡು ತೀರಿಸಿಕೊಳ್ಳಲು ಬಯಸಿದ್ದಾರೆ ಎಂದು ವಿವರ ನೀಡಿದರು.

ಕಾಮಗಾರಿಗಿಂತ ಮುಂಚೆಯೇ ಹಣ ಬಿಡುಗಡೆ ಮಾಡಿದ ಆರೋಪ ನಿಮ್ಮ ಮೇಲಿದೆಯಲ್ಲಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ದಾಖಲೆ ನೀಡಿದರೆ, ನೀವು ಹೇಳಿದಂತೆ ಕೇಳುತ್ತೇನೆ ಎಂದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 11

  Happy
 • 1

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !