ಶುಕ್ರವಾರ, ಫೆಬ್ರವರಿ 28, 2020
19 °C

ಮಂಗಳೂರಿನಲ್ಲಿ ಬಾಂಬ್: ಶಿವಮೊಗ್ಗದಲ್ಲೂ ತಪಾಸಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆಯಾದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ಹಲವೆಡೆ ಮಂಗಳವಾರ ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳದ ಸಿಬ್ಬಂದಿ ತಪಾಸಣೆ ನಡೆಸಿದರು.

ಕೆಎಸ್‌ಆರ್‌ಟಿಸಿ ನಿಲ್ದಾಣ, ಖಾಸಗಿ ಬಸ್‌ನಿಲ್ದಾಣ, ರೈಲು ನಿಲ್ದಾಣ ಹಾಗೂ ಜನನಿಬಿಡ ಪ್ರದೇಶಗಳ ಮಳಿಗೆಗಳು, ವಾಹನ ನಿಲುಗಡೆ ಸ್ಥಳಗಳು, ಪ್ಲಾಟ್‌ಫಾರಂ, ಲಗ್ಗೇಜ್ ರೂಂ ಮತ್ತಿತರ ಸ್ಥಳಗಳಲ್ಲಿ ನಾಲ್ಕೈದು ಗಂಟೆ ತಪಾಸಣೆ ನಡೆಸಿದರು. ಪೊಲೀಸರು ಅನುಮಾನಾಸ್ಪದ ವ್ಯಕ್ತಿಗಳ ವಿಚಾರಣೆ ಮಾಡಿದರು.

‘ಜಿಲ್ಲೆಯ ಎಲ್ಲ ಜನದಟ್ಟಣೆ ಪ್ರದೇಶಗಳಲ್ಲಿ ತಪಾಸಣಾ ಕಾರ್ಯ ಮುಂದುವರಿಯಲಿದೆ. ಅನುಮಾನಸ್ಪದ ಬ್ಯಾಗ್, ಚೀಲ, ಬೈಕ್, ಕಾರು, ವ್ಯಕ್ತಿಗಳ ಕುರಿತು ಮಾಹಿತಿ ಸಿಕ್ಕರೆ ತಕ್ಷಣ ಪೊಲೀಸ್ ಕಂಟ್ರೋಲ್ ರೂಂ (94808 03300)ಗೆ ಮಾಹಿತಿ ನೀಡಬೇಕು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು ಕೋರಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು