ಬುಧವಾರ, ಆಗಸ್ಟ್ 10, 2022
25 °C

ಅಪರಾಧ ಪ್ರಕರಣ ತನಿಖೆಗೆ ಹೈಕೋರ್ಟ್ ಗಡುವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಅಪರಾಧ ಪ್ರಕರಣಗಳ ತನಿಖೆಯ ವಿಳಂಬವನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್, ಪೊಲೀಸರು ಮತ್ತು ತನಿಖಾ ಸಂಸ್ಥೆಗಳಿಗೆ ಇಂತಿಷ್ಟೇ ಅವಧಿಯಲ್ಲಿ ತನಿಖೆ ಪೂರ್ಣಗೊಳಿಸಬೇಕೆಂಬ ಗಡುವು ನಿಗದಿಪಡಿಸಿದೆ.

ಸಣ್ಣ ಪುಟ್ಟ ಅಪರಾಧಗಳು ಮತ್ತು ಗಂಭೀರ ಅಪರಾಧಗಳ ತನಿಖೆ ಪೂರ್ಣಗೊಳಿಸಲು ಕ್ರಮವಾಗಿ 60 ಮತ್ತು 90 ದಿನಗಳ ಕಾಲಾವಕಾಶ ನಿಗದಿಪಡಿಸಿದೆ.

ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯಕುಮಾರ್‌ ಪಾಟೀಲ್ ವಿರುದ್ಧ 2012ರಲ್ಲಿ ಸಲ್ಲಿಸಲಾಗಿದ್ದ ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣದಲ್ಲಿ ತನಿಖೆ ವಿಳಂಬವಾಗುತ್ತಿದೆ ಎಂದು ದೂರುದಾರ ಸುಜಿತ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್. ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಮಹತ್ವದ ಮಧ್ಯಂತರ ಆದೇಶ ನೀಡಿದ್ದು, ತ್ವರಿತ ತನಿಖೆಗೆ ವಿಸ್ತೃತ ಮಾರ್ಗಸೂಚಿ ರೂಪಿಸಿ ಪೊಲೀಸರಿಗೆ ಹಲವು ನಿರ್ದೇಶನ
ಗಳನ್ನು ನೀಡಿದೆ.

ತನಿಖೆ ಪೂರ್ಣಗೊಳಿಸಲು ಸಮಯ ವಿಸ್ತರಣೆಗೆ ಸೂಕ್ತ ಕಾರಣ ಪಡೆದು ವಿಚಾರಣಾ ಕೋರ್ಟ್‌ಗಳು ಪೊಲೀಸರ ಕೋರಿಕೆಯ ಮೇರೆಗೆ ತನಿಖೆಯ ಅವಧಿಯನ್ನು ವಿಸ್ತರಣೆ ಮಾಡಬಹುದು ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು