ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಹಿತ್ಯ ಅಕಾಡೆಮಿ 2013ರ ಲಲಿತ ಪ್ರಬಂಧ ಪ್ರಶಸ್ತಿ ರದ್ದು

Last Updated 20 ಜೂನ್ 2022, 20:19 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯ 2013ನೇ ಸಾಲಿನ ಲಲಿತ ಪ್ರಬಂಧ ಪ್ರಶಸ್ತಿಗೆ ಹುಬ್ಬಳ್ಳಿಯ ಎಂ.ಡಿ. ಗೋಗೇರಿ ವಿರಚಿತ ‘ಮಹಾಮಾತೆ ಮಲ್ಲಮ್ಮ ಮತ್ತು ಇತರೆ ಪ್ರಬಂಧಗಳು’ ಪುಸ್ತಕವನ್ನು ಆಯ್ಕೆ ಮಾಡಿರುವುದನ್ನು ಹೈಕೋರ್ಟ್ ರದ್ದುಪಡಿಸಿದೆ.

'ಗೋಗೇರಿ ಅವರ ಪುಸ್ತಕವನ್ನು ಪ್ರಶಸ್ತಿಗೆ ಆಯ್ಕೆ ಮಾಡುವಾಗ ಸಮಿತಿಯು ನಿಯಮ ಪಾಲನೆ ಮಾಡಿಲ್ಲ' ಎಂದು ಆಕ್ಷೇಪಿಸಿ ಕೊಡಗಿನ ಭಾರದ್ವಾಜ ಅವರು ರಿಟ್ ಅರ್ಜಿ
ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಜಿ.ಪಂಡಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.

'ಅಕಾಡೆಮಿಯು 2013ನೇ ಸಾಲಿನ ಲಲಿತ ಪ್ರಬಂಧ ಪ್ರಕಾರದ ಪ್ರಶಸ್ತಿಗೆ ಹೊಸದಾಗಿ ಪುಸ್ತಕ ಆಯ್ಕೆ ಮಾಡಬೇಕು. ಅದಕ್ಕಾಗಿ ಅಕಾಡೆಮಿಯ ಬೈ-ಲಾ 93 (ಉ) 12ನೇ ಷರತ್ತಿನ ಅನ್ವಯ ಉಪ ಸಮಿತಿಯನ್ನು ಪುನರ್ ರಚಿಸಬೇಕು. ಉಪ ಸಮಿತಿ ಭಾರದ್ವಾಜ ಮತ್ತು ಗೋಗೇರಿ ಅವರ ಪುಸ್ತಕಗಳನ್ನು ಮೌಲ್ಯಮಾಪನ ಮಾಡಿ ಪ್ರಶಸ್ತಿಗೆ ಶಿಫಾರಸು ಮಾಡಬಹುದು. ಈ ಪ್ರಕ್ರಿಯೆಯನ್ನು ಎರಡು ತಿಂಗಳಲ್ಲಿ ಪೂರ್ಣಗೊಳಿಸಬೇಕು' ಎಂದು ನ್ಯಾಯಪೀಠ ತಿಳಿಸಿದೆ.

ಪ್ರಕರಣವೇನು?: ಅಕಾಡೆಮಿಯು 2013ನೇ ಸಾಲಿನಲ್ಲಿ ಲಲಿತ ಪ್ರಬಂಧ ಪ್ರಕಾರದ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿತ್ತು. ಸಾಹಿತಿ ಭಾರದ್ವಾಜ ಅವರ ‘ಕೌತುಕವಲ್ಲದ ಕ್ಷಣಗಳು’ ಮತ್ತು ಗೋಗೇರಿ ಅವರ ‘ಮಹಾಮಾತೆ ಮಲ್ಲಮ್ಮ ಮತ್ತು ಇತರೆ ಪ್ರಬಂಧಗಳು’ ಸ್ಪರ್ಧೆಯಲ್ಲಿದ್ದವು.

ಎರಡೂ ಪುಸ್ತಕಗಳಿಗೆ ತಲಾ 57 ಅಂಕಗಳು ಬಂದಿದ್ದವು. ಅದರನ್ವಯ ಪುಸ್ತಕಗಳನ್ನು ಅಕಾಡೆಮಿ ಅಧ್ಯಕ್ಷರು ಮತ್ತು ಇಬ್ಬರು ಸದಸ್ಯರನ್ನು ಒಳಗೊಂಡ ಉಪ ಸಮಿತಿಗೆ ಪುಸ್ತಕ ಕಳುಹಿಸಿಕೊಡಲಾಗಿತ್ತು. ಉಪ ಸಮಿತಿಯು ಮೌಲ್ಯಮಾಪನ ಮಾಡಿ ಗೋಗೇರಿ ಅವರ ‘ಮಲ್ಲಮ್ಮ ಮತ್ತು ಇತರೆ ಪ್ರಬಂಧಗಳು’ ಪುಸ್ತಕವನ್ನು ಆಯ್ಕೆ ಮಾಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT