ಪಾಲಿಕೆ ಚುನಾವಣೆ: ತಡೆಯಾಜ್ಞೆ ಕೋರಿ ಹೈಕೋರ್ಟ್‌ ಮೊರೆ

7

ಪಾಲಿಕೆ ಚುನಾವಣೆ: ತಡೆಯಾಜ್ಞೆ ಕೋರಿ ಹೈಕೋರ್ಟ್‌ ಮೊರೆ

Published:
Updated:

ಶಿವಮೊಗ್ಗ: ನಗರ ಪಾಲಿಕೆ ಚುನಾವಣೆಗೂ ಮೊದಲು ಜನಸಂಖ್ಯೆಗೆ ಅನುಗುಣವಾಗಿ ವಾರ್ಡ್‌ಗಳ ಎಲ್ಲೆಗಳನ್ನು ಸೂಕ್ತವಾಗಿ ಗುರುತಿಸಿಲ್ಲ. ತಾರತಮ್ಯ ಮಾಡಲಾಗಿದೆ ಎಂದು ಆರೋಪಿಸಿ ಪಾಲಿಕೆ ಸದಸ್ಯರಾದ ಅರ್ಚನಾ ಬಳ್ಳೇಕೆರೆ, ಸುರೇಖಾ ಮುರಳೀಧರ್, ರಾಮು, ಎಸ್‌.ಎಸ್. ಸತೀಶ್ ಹೈಕೋರ್ಟ್‌ ಮೆಟ್ಟಿಲು ಏರಿದ್ದಾರೆ.

ಹಲವು ವಾರ್ಡ್‌ಗಳಲ್ಲಿ ಜನಸಂಖ್ಯೆ ಅತ್ಯಂತ ಕಡಿಮೆ ಇದೆ. ಕೆಲವು ವಾರ್ಡ್‌ಗಳ ಜನ ಸಂಖ್ಯೆ ಅಧಿಕವಾಗಿದೆ. ಈ ತಾರತಮ್ಯ ನಿವಾರಣೆಯಾಗುವರೆಗೂ ಪಾಲಿಕೆಗೆ ಚುನಾವಣೆ ಘೋಷಣೆ ಮಾಡದಂತೆ ತಡೆಯಾಜ್ಞೆ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಿರುವ ಹೈಕೋರ್ಟ್, ಆ. 6ಕ್ಕೆ ವಿಚಾರಣೆ ನಿಗದಿ ಮಾಡಿದೆ. ಮತ್ತೊಂದೆಡೆ ಕೆಲವರು ಮೀಸಲಾತಿ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲು ಏರಿದ್ದು, ವಿಚಾರಣೆ ನಡೆಯುತ್ತಿದೆ.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !