ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುವೆಂಪು ವಿ.ವಿ ನಿರ್ಧಾರ ಎತ್ತಿಹಿಡಿದ ಹೈಕೋರ್ಟ್‌

ಪರೀಕ್ಷೆ ಎದುರಿಸದೇ ಪದವಿ ವಿದ್ಯಾರ್ಥಿಗಳು ಉತ್ತೀರ್ಣ
Last Updated 3 ಜೂನ್ 2022, 20:21 IST
ಅಕ್ಷರ ಗಾತ್ರ

ಬೆಂಗಳೂರು: ಕುವೆಂಪು ವಿಶ್ವವಿದ್ಯಾಲಯದ ದೂರ ಶಿಕ್ಷಣ ಕೇಂದ್ರದ 2019–20ನೇ ಸಾಲಿನ ಪದವಿ
ವಿದ್ಯಾರ್ಥಿಗಳಿಗೆ ಕೋವಿಡ್‌–19ರ ಕಾರಣಕ್ಕೆ ಪರೀಕ್ಷೆ ಎದುರಿಸದೇಉತ್ತೀರ್ಣಗೊಳಿಸಿ ಮುಂದಿನ ತರಗತಿಗಳಿಗೆ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಿದ್ದವಿಶ್ವವಿದ್ಯಾಲಯದ ಕುಲಪತಿ ನಿರ್ಧಾರವನ್ನು ಹೈಕೋರ್ಟ್‌ ಎತ್ತಿ ಹಿಡಿದಿದೆ.

ಈ ಕುರಿತಂತೆ ಹಾಸನದ ಸುಜಲಾ ಕಾಲೇಜ್‌ ಆಫ್‌ ಕಾಮರ್ಸ್ ಸೇರಿದಂತೆ ಏಳು ಜನರು
ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಎಂ.ಐ.ಅರುಣ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಲೇವಾರಿ ಮಾಡಿದೆ.

ಕೋವಿಡ್‌ ಕಾರಣಕ್ಕಾಗಿ ದೂರ ಶಿಕ್ಷಣ ಕೇಂದ್ರದ ವಿದ್ಯಾರ್ಥಿಗಳನ್ನು ಅವರ ಹಿಂದಿನ ಸೆಮಿಸ್ಟರ್‌ ಅಥವಾ ಪರೀಕ್ಷೆಗಳಲ್ಲಿ ಪಡೆದ ಅಂಕಗಳು ಹಾಗೂ ಆಂತರಿಕ ಅಂಕಗಳ ಆಧಾರದಲ್ಲಿ ಉತ್ತೀರ್ಣಗೊಳಿಸಬೇಕು ಎಂದು ವಿಶ್ವವಿದ್ಯಾಲಯ
ಅನುದಾನ ಆಯೋಗ (ಯುಜಿಸಿ) ನೀಡಿದ್ದ ಮಾರ್ಗಸೂಚಿಯನ್ನು ರಾಜ್ಯದಲ್ಲೂ ಅಳವಡಿಸಿಕೊಳ್ಳಲಾಗಿತ್ತು. ಇದರನ್ವಯ ಕುವೆಂಪು ವಿಶ್ವವಿದ್ಯಾಲಯ 2019–20ನೇ ಸಾಲಿನ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸ
ದೆಯೇ ಮುಂದಿನ ತರಗತಿಗೆ
ಉತ್ತೀರ್ಣಗೊಳಿಸಿತ್ತು.

ಏತನ್ಮಧ್ಯೆ, ಕುವೆಂಪು ವಿವಿ ಸಿಂಡಿಕೇಟ್‌ 2022ರ ಫೆಬ್ರುವರಿ 8ರಂದು ಸಭೆ ಸೇರಿ ಕುಲಪತಿಗಳ ಆದೇಶಕ್ಕೆ ತಕರಾರು ತೆಗೆದಿತ್ತು. ಈ ಆದೇಶವನ್ನು ರದ್ದುಪಡಿಸಲು ನಿರ್ಧರಿಸಿತು ಮತ್ತು ಯಾರೆಲ್ಲಾ ದೂರ ಶಿಕ್ಷಣ ಕೇಂದ್ರದಲ್ಲಿ ಮುಂದಿನ ತರಗತಿಗಳಿಗೆ ಪರೀಕ್ಷೆ ಬರೆಯದೆಯೇ ಉತ್ತೀರ್ಣರಾಗಿದ್ದಾರೊ ಅವರೆಲ್ಲಾ ಪರೀಕ್ಷೆ ಬರೆಯಬೇಕು ಎಂಬ ನಿರ್ಣಯವನ್ನು ಅಂಗೀಕರಿಸಿತು. ಈ ಕುರಿತಂತೆ ವಿಶ್ವವಿದ್ಯಾಲಯದ ಸಂಯೋಜಿತ ಅಧ್ಯಯನ ಕೇಂದ್ರಗಳಿಗೆ ಮಾಹಿತಿ ನೀಡಲಾಗಿತ್ತು.

ಇದನ್ನು ಪ್ರಶ್ನಿಸಿ ವಿದ್ಯಾರ್ಥಿಗಳೂ ಸೇರಿದಂತೆ ಕೆಲವು ಅಧ್ಯಯನ ಕೇಂದ್ರಗಳು ಹೈಕೋರ್ಟ್‌ ಮೆಟ್ಟಿಲೇರಿದ್ದವು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ, ‘ಕೋವಿಡ್‌ ಕಾರಣಕ್ಕಾಗಿ ಪರೀಕ್ಷೆ ನಡೆಸದೆಯೇ ಉತ್ತೀರ್ಣಗೊಳಿಸಲು ನಿರ್ಧಾರ ಕೈಗೊಳ್ಳುವ ಮುನ್ನ ಆಲೋಚಿಸಬೇಕಿತ್ತು. ವಿದ್ಯಾರ್ಥಿಗಳು ಈಗಾಗಲೇ ಮುಂದಿನ ತರಗತಿಗಳಿಗೆ ಶುಲ್ಕ ಪಾವತಿ ಮಾಡಿ ಪ್ರವೇಶ ಪಡೆದಿದ್ದಾರೆ. ಆದ್ದರಿಂದ, ಈ ಹಂತದಲ್ಲಿ ಸಿಂಡಿಕೇಟ್‌ ನಿರ್ಣಯವನ್ನು ಮಾನ್ಯ ಮಾಡಲು ಆಗದು’ ಎಂದು ಅಭಿಪ್ರಾಯಪಟ್ಟಿದೆ.

ಅರ್ಜಿದಾರರ ಪರ ವರದರಾಜ್ ಆರ್.ಹವಾಲ್ದಾರ್‌ ವಕಾಲತ್ತು ವಹಿಸಿದ್ದರು. ಹಿರಿಯ ವಕೀಲ ಕೆ.ಎನ್‌.ಫಣೀಂದ್ರ ವಾದ ಮಂಡಿಸಿದರು. ಪ್ರಕರಣದಲ್ಲಿ ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವ ಹಾಗೂ ಮೌಲ್ಯಮಾಪನ ಕುಲಸಚಿವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT