ಭಾನುವಾರ, ಫೆಬ್ರವರಿ 23, 2020
19 °C

ಅರಣ್ಯ ಇಲಾಖೆ ಕಟ್ಟಡ ಏರಿದ ಉಪಾಧ್ಯಕ್ಷ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಮನೆಯ ಹಕ್ಕುಪತ್ರ ಪಡೆಯಲು ಅರಣ್ಯ ಇಲಾಖೆ ನಿರಪೇಕ್ಷಣಾ ಪತ್ರ ನೀಡಬೇಕು ಎಂದು ಆಗ್ರಹಿಸಿ ಹೊಸನಗರ ತಾಲ್ಲೂಕು ಮೂಡುಗೊಪ್ಪ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕರುಣಾಕರ ಶೆಟ್ಟಿ  ಬುಧವಾರ ಅರಣ್ಯ ಇಲಾಖೆ ನಗರ ವಲಯ ಅರಣ್ಯಾಧಿಕಾರಿ ಕಚೇರಿ ಕಟ್ಟಡ ಏರಿ ಪ್ರತಿಭಟನೆ ನಡೆಸಿದರು.

ಮೂಡುಗೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 220 ಮನೆಗಳಿವೆ. ಹಲವು ದಶಕಗಳಿಂದ ಅಲ್ಲೇ ವಾಸಿಸುತ್ತಿದ್ದಾರೆ. ಅರಣ್ಯ ವ್ಯಾಪ್ತಿಯಲ್ಲಿವೆ ಎಂಬ ಕಾರಣಕ್ಕೆ ಹಕ್ಕುಪತ್ರ ನೀಡಿಲ್ಲ. ನಿರಪೇಕ್ಷಣಾ ಪತ್ರ ನೀಡುವಂತೆ ಕೋರಿ ಅರಣ್ಯ ಇಲಾಖೆಗೆ ಸಾಕಷ್ಟು ಬಾರಿ ಮನವಿ ಸಲ್ಲಿಸಲಾಗಿದೆ. ಸಮಸ್ಯೆ ಬಗೆಹರಿಸಲು ಅಧಿಕಾರಿಗಳು, ಜನಪ್ರತಿನಿಧಿಗಳು ಗಮನ ಹರಿಸಿಲ್ಲ ಎಂದು ದೂರಿದರು.

ನಿರಪೇಕ್ಷಣಾ ಪತ್ರ ನೀಡುವವರೆಗೂ ಕೆಳಗೆ ಇಳಿಯುವುದಿಲ್ಲ ಎಂದು ಪಟ್ಟು ಹಿಡಿದರು. ಕೊನೆಗೆ ಅಧಿಕಾರಿಗಳು ಹರಸಾಹಸ ಮಾಡಿ ಅವರನ್ನು ಕೆಳಗೆ ಇಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)