ನಮ್ಮೆಲ್ಲರ ಆರಾಧ್ಯ ದೈವ ಸದ್ಗುರು ಶ್ರೀ ಸಿದ್ಧಾರೂಢ ಸ್ವಾಮೀಜಿ ಅವರ ಆಶೀರ್ವಾದದಿಂದ ಹುಬ್ಬಳ್ಳಿ ಜನರ ಬಹಳ ದಿನದ ಬೇಡಿಕೆಯಂತೆ ಹುಬ್ಬಳ್ಳಿಯ ರೈಲ್ವೆ ನಿಲ್ದಾಣಕ್ಕೆ ಶ್ರೀ ಸಿದ್ಧಾರೂಡ ಸ್ವಾಮೀಜಿ ರೈಲ್ವೆ ನಿಲ್ದಾಣವೆಂದು ನಾಮಕರಣ ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ನಾನು ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಪಿಯೂಷ್ ಗೋಯಲ್ ಮತ್ತು ಸುರೇಶ ಅಂಗಡಿ ಅವರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಫೇಸ್‌ಬುಕ್‌ನಲ್ಲಿಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಂತಸ ವ್ಯಕ್ತಪಡಿಸಿದ್ದಾರೆ.