ರೇಣುಕಾಂಬ ಸಂಸ್ಥೆ: 19ಕ್ಕೆ ಯಕ್ಷಗಾನ, ಸನ್ಮಾನ

7

ರೇಣುಕಾಂಬ ಸಂಸ್ಥೆ: 19ಕ್ಕೆ ಯಕ್ಷಗಾನ, ಸನ್ಮಾನ

Published:
Updated:

ಶಿವಮೊಗ್ಗ: ಕುವೆಂಪು ರಂಗಮಂದಿರದಲ್ಲಿ ಆ.19ರ ಸಂಜೆ 5.30ಕ್ಕೆ ಶ್ರೀರೇಣುಕಾಂಬ ಗ್ರಾಮೀಣ ಸೇವಾ ಸಂಸ್ಥೆ 9ನೇ ವರ್ಷದ ವಾರ್ಷಿಕೋತ್ಸವ ಸಾಧಕರಿಗೆ ಸನ್ಮಾನ ಮತ್ತು ಯಕ್ಷಗಾನ ಕಾರ್ಯಕ್ರಮ ಹಮ್ಮಿಕೊಂಡಿದೆ.

ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಕುಲಪತಿ ಡಾ.ಎಂ.ಕೆ. ನಾಯಕ್ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕರಾದ  ಕೆ.ಬಿ. ಅಶೋಕ್ ನಾಯ್ಕ, ವಿಧಾನ ಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್, ಜಿಲ್ಲಾಧಿಕಾರಿ ಕೆ.ಎ. ದಯಾನಂದ್, ಸಿಗಂದೂರು ಚೌಡೇಶ್ವರಿ ದೇವಸ್ಥಾನದ ಧರ್ಮದರ್ಶಿ ರಾಮಪ್ಪ ಉಪಸ್ಥಿತರಿರುವರು ಎಂದರು ಎಂದು ಸಂಸ್ಥೆಯ ಅಧ್ಯಕ್ಷ ಆರ್. ಶ್ರೀಧರ್ ಹುಲ್ತಿಕೊಪ್ಪ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಅಂದು ಸಂಜೆ 5.30ಕ್ಕೆ ಪರಮೇಶ್ವರ ಹೆಗಡೆ ಐನಬೈಲು ಅವರ ನಿರ್ದೆಶನದಲ್ಲಿ ದಕ್ಷ ಯಜ್ಞ ಮತ್ತು ಗಿರಿಜಾ ಕಲ್ಯಾಣ ಯಕ್ಷಗಾನ ಆಯೋಜಿಸಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಎಸ್.ಎಲ್. ರಾಮಚಂದ್ರ, ಗುಣಸೇ ರಾಮಸ್ವಾಮಿ, ಎಚ್. ರವಿ, ಲೋಕೇಶ್ ಉಪಸ್ಥಿತರಿದ್ದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !