ಬಿಜೆಪಿ ಅಭ್ಯರ್ಥಿಯಾಗಲು ಸಿದ್ಧ; ರುದ್ರೇಶ್‌

6

ಬಿಜೆಪಿ ಅಭ್ಯರ್ಥಿಯಾಗಲು ಸಿದ್ಧ; ರುದ್ರೇಶ್‌

Published:
Updated:
Deccan Herald

ರಾಮನಗರ: ‘ಪಕ್ಷವು ಬಯಸಿದಲ್ಲಿ ಮುಂಬರುವ ರಾಮನಗರ ವಿಧಾನಸಭೆ ಉಪಚುನಾವಣೆಯಲ್ಲಿ ಅಭ್ಯರ್ಥಿಯಾಗಲು ಸಿದ್ಧನಿದ್ದೇನೆ’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಂ. ರುದ್ರೇಶ್‌ ಹೇಳಿದರು.

ಇಲ್ಲಿ ಶುಕ್ರವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು ‘ಸದ್ಯ ಉಪ ಚುನಾವಣೆಗೆ ನನ್ನ ಜೊತೆಗೆ ಸಿ.ಪಿ. ಯೋಗೇಶ್ವರ್ ಅವರ ಹೆಸರು ಹೆಚ್ಚಾಗಿ ಚಾಲ್ತಿಯಲ್ಲಿದೆ. ಯೋಗೇಶ್ವರ್‌ ನನಗಿಂತ ಹಿರಿಯರಿದ್ದಾರೆ. ಅವರು ಉಪ ಚುನಾವಣೆಗೆ ಸ್ಪರ್ಧಿಸುತ್ತಾರೋ ಇಲ್ಲವೇ ಮುಂದಿನ ಲೋಕಸಭೆ ಚುನಾವಣೆಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗುತ್ತಾರೋ ಗೊತ್ತಿಲ್ಲ. ಆಗಸ್ಟ್ 17ರ ನಂತರ ಅವರು ಜಿಲ್ಲೆಯ ರಾಜಕಾರಣದಲ್ಲಿ ಸಕ್ರಿಯರಾಗಲಿದ್ದಾರೆ. ಅವರು ಉಪ ಚುನಾವಣೆಗೆ ನಿಲ್ಲಲು ಬಯಸದೇ ಹೋದರೆ ನಾನೇ ಅಭ್ಯರ್ಥಿಯಾಗುತ್ತೇನೆ’ ಎಂದರು.

‘ಕಳೆದ ಚುನಾವಣೆಯಲ್ಲಿ ಈ ಕ್ಷೇತ್ರದಿಂದ ಅಭ್ಯರ್ಥಿಯಾಗಿದ್ದ ಲೀಲಾವತಿ ಅವರು ಪಕ್ಷವು ನೀಡಿದ ಹಣ ದುರುಪಯೋಗ ಮಾಡಿಕೊಂಡಿದ್ದು ಸಾಬೀತಾಗಿದೆ. ಈ ಕಾರಣಕ್ಕೆ ಅವರನ್ನು ಅಮಾನತು ಮಾಡಲಾಗಿದೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !